ಬಾಕಿ ಉಳಿದಿರುವ ಜೆಇಇ ಮುಖ್ಯ ಪರೀಕ್ಷೆ ಆಗಸ್ಟ್ ನಲ್ಲಿ, ನೀಟ್ ಸೆಪ್ಟೆಂಬರ್ ಗೆ ಮುಂದೂಡಿಕೆ: ಶಿಕ್ಷಣ ಇಲಾಖೆ 

ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇಯ ಬಾಕಿ ಉಳಿದಿರುವ ಪರೀಕ್ಷೆ ನಡೆಸಲು ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಸೆಪ್ಟೆಂಬರ್ ಗೆ ಮುಂದೂಡಲು ಶಿಕ್ಷಣ ಇಲಾಖೆ ಚಿಂತಿಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇಯ ಬಾಕಿ ಉಳಿದಿರುವ ಪರೀಕ್ಷೆ ನಡೆಸಲು ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಸೆಪ್ಟೆಂಬರ್ ಗೆ ಮುಂದೂಡಲು ಶಿಕ್ಷಣ ಇಲಾಖೆ ಚಿಂತಿಸುತ್ತಿದೆ.

ಆದರೆ, ಈ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಕೈಗೊಂಡಿಲ್ಲ, ಶಿಕ್ಷಣ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19 ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ಜುಲೈ ಅಥವಾ ಆಗಸ್ಟ್ ಕೊನೆಯಲ್ಲಿ 15 ದಿನಗಳ ಅಂತರದಲ್ಲಿ ಜೆಇಇ ಮುಖ್ಯ ಪರೀಕ್ಷೆಯ ಬಾಕಿಯನ್ನು ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ನೀಟ್ ಪರೀಕ್ಷೆ ಸೆಪ್ಟೆಂಬರ್ ನಲ್ಲಿ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸಕ್ತ ಶೈಕ್ಷಣಿಕ ಸಾಲಿನ ನಂತರ ಜೆಇಇ ಮುಖ್ಯ ಪರೀಕ್ಷೆಯನ್ನು ವರ್ಷದಲ್ಲಿ ನಾಲ್ಕು ಬಾರಿ ನಡೆಸುವ ಮೂಲಕ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸಲು ಅವಕಾಶ ನೀಡಲಿದೆ. ಮೊದಲ ಹಂತದ ಪರೀಕ್ಷೆ ಫೆಬ್ರವರಿಯಲ್ಲಿ, ಎರಡನೇ ಹಂತ ಮಾರ್ಚ್ ತಿಂಗಳಲ್ಲಿ ಮತ್ತು ಉಳಿದೆರಡು ಹಂತಗಳ ಪರೀಕ್ಷೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com