ಶೋಪಿಯಾನ್ ಎನ್ಕೌಂಟರ್: ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಅಪರಿಚಿತ ಉಗ್ರನೊರ್ವನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿರ್ದಿಷ್ಟ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಶಿರ್ಮಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಕಂಡ ಉಗ್ರರು ಕೂಡಲೇ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಉಗ್ರನೋರ್ವ ಹತನಾಗಿದ್ದಾನೆ.
ಹತ್ಯೆಗೀಡಾದ ಉಗ್ರನ ಗುರುತು ಮತ್ತು ಯಾವ ಸಂಘಟನೆಗೆ ಸೇರಿದ್ದವನು ಎಂಬ ಮಾಹಿತಿಗಳನ್ನು ಪತ್ತೆಹಚ್ಚಲಾಗುತ್ತಿದೆ ಎಂದರು. ಇನ್ನು ಸ್ಥಳದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಯುತ್ತಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


