ಸಂಗ್ರಹ ಚಿತ್ರ
ದೇಶ
ಗನ್ ಪಾಯಿಂಟ್ ನಲ್ಲಿ ಅಪ್ರಾಪ್ತ ಬಾಲಕಿಯನ್ನು ಸೆಕ್ಸ್‌ಗೆ ಒತ್ತಾಯಿಸಿದ್ದ ಸಬ್ ಇನ್ಸ್‌ಪೆಕ್ಟರ್ ಬಂಧನ!
ಗನ್ ಪಾಯಿಂಟ್‌ನಲ್ಲಿ 15 ವರ್ಷದ ಬಾಲಕಿಗೆ ಸೆಕ್ಸ್ ಗಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಕಾಸಿಮೇಡು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ.
ಚೆನ್ನೈ: ಗನ್ ಪಾಯಿಂಟ್‌ನಲ್ಲಿ 15 ವರ್ಷದ ಬಾಲಕಿಗೆ ಸೆಕ್ಸ್ ಗಾಗಿ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಕಾಸಿಮೇಡು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ.
ಆರೋಪಿ ಪೊಲೀಸ್ ಅಧಿಕಾರಿ ಸತೀಶ್ ಕುಮಾರ್ ಬಾಲಕಿಯ ತಾಯಿ ಮತ್ತು ಚಿಕ್ಕಮ್ಮನೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ಇತ್ತೀಚೆಗೆ ಸತೀಶ್ ತನ್ನ ಸರ್ವಿಸ್ ಗನ್ ತೆಗೆದು ಬಾಲಕಿ ಬೆದರಿಸಿದ್ದು ಅಲ್ಲದೆ ಈ ವಿಷಯ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾಗಿ ಹೇಳಿದೆ.
ಘಟನೆ ನಂತರ ಹುಡುಗಿ ನಡೆದ ಪ್ರಸಂಗವನ್ನು ತನ್ನ ತಂದೆಗೆ ತಿಳಿಸಿದ್ದಾಳೆ. ಕೂಡಲೇ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಾಲಕಿಯ ತಾಯಿ, ಚಿಕ್ಕಮ್ಮ ಹಾಗೂ ಸತೀಶ್ ಕುಮಾರ್ ನನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ