ದೇಶದಲ್ಲಿ ಇದುವರೆಗೂ 40 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಭಾರತದಲ್ಲಿ ಇದೂವರೆಗೂ 40 ಕೋಟಿಗೂ ಹೆಚ್ಚು ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಹೇಳಿದೆ.

ನವದೆಹಲಿ: ಭಾರತದಲ್ಲಿ ಇದೂವರೆಗೂ 40 ಕೋಟಿಗೂ ಹೆಚ್ಚು ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಶನಿವಾರ ಹೇಳಿದೆ.
ಐಸಿಎಂಆರ್ ಮಾಹಿತಿ ನೀಡಿರುವ ಪ್ರಕಾರ ಈ ವರೆಗೂ ಅಂದರೆ ಜೂನ್ 26ರವರೆಗೂ 40,18,11,892 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17,45,809 ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದೆ.
ಜೂನ್ 1, 2021 ರವರೆಗೆ ದೇಶದಲ್ಲಿ 35 ಕೋಟಿ ಕೋವಿಡ್ ಪರೀಕ್ಷೆ ನಡೆಲಾಗಿತ್ತು. ದೇಶಾದ್ಯಂತ ಪರೀಕ್ಷಾ ಮೂಲಸೌಕರ್ಯ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವುದು ಮತ್ತು ಕೈಗೆಟುಕುವ ದರದಲ್ಲಿ ಪರೀಕ್ಷಾ ಕಿಟ್ ಗಳನ್ನು ವಿತರಿಸುತ್ತಿರುವುದರಿಂದ ಪರೀಕ್ಷೆಗಳ ಹೆಚ್ಚಾಗಿದೆ ಎಂದು ತಿಳಿಸಿದೆ.
ಐಸಿಎಂಆರ್ ಪ್ರಧಾನ ನಿರ್ದೇಶಕ ಪ್ರೊ.ಬಾಲರಾಮ್ ಭಾರ್ಗವ ಅವರು ಮಾತನಾಡಿ, ಪರೀಕ್ಷೆಗಳ ಸಂಖ್ಯೆ ಹೆಚ್ಚಾಗುವುದರಿಂದ ಶೀಘ್ರಗತಿಯಲ್ಲಿ ಸೋಂಕಿತರನ್ನು ಪತ್ತೆ ಮಾಡಲು ಸಹಾವಾಗುತ್ತದೆ. ಇದರಿಂದ ಸೋಂಕಿತರಿಕೆ ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿ, ಸಾವಿನ ಪ್ರಮಾಣವನ್ನು ಇಳಿಕೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಾಗಿರುವುದು ಭಾರತವು 5 ಟಿ ವಿಧಾನ 'ಟೆಸ್ಟ್, ಟ್ರ್ಯಾಕ್, ಟ್ರೇಸ್, ಟ್ರೀಟ್ ಮತ್ತು ಟೆಕ್ನಾಲಜಿ ಬಳಕೆಯ ಕಾರ್ಯತಂತ್ರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಇದು ಸಾಂಕ್ರಾಮಿಕ ರೋಗವನ್ನು ಹರಡುವುದನ್ನು ತಡೆಯಲು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


