ದೇಶ

ಮಾದಕದ್ರವ್ಯದ ವಿರುದ್ಧ ಶೂನ್ಯ ಸಹಿಷ್ಣು ನೀತಿ ಜಾರಿಗೆ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ: ಕೇಂದ್ರ ಗೃಹ ಸಚಿವ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವು ಎಲ್ಲಾ ರೀತಿಯ ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣು ನೀತಿಯ ಜಾರಿಗೆ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಮಾದಕದ್ರವ್ಯದ ವಿರುದ್ಧ ಶೂನ್ಯ ಸಹಿಷ್ಣು ನೀತಿ ಜಾರಿಗೆ ಪ್ರಧಾನಿ ಮೋದಿ ಸರ್ಕಾರ ಬದ್ಧವಾಗಿದೆ: ಕೇಂದ್ರ ಗೃಹ ಸಚಿವ
ಗೃಹ ಸಚಿವ ಅಮಿತ್ ಶಾ
Published On :

ನವದೆಹಲಿ; ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರವು ಎಲ್ಲಾ ರೀತಿಯ ಮಾದಕವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣು ನೀತಿಯ ಜಾರಿಗೆ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಮಾದಕವಸ್ತುಗಳ ವ್ಯಸನವನ್ನು ತೊಡೆದುಹಾಕಲು ಮಾದಕ ವಸ್ತು ನಿಯಂತ್ರಕ ಸಂಸ್ಥೆ (ಎನ್'ಸಿಬಿ)ಯ ಶ್ರಮವನ್ನು ಶ್ಲಾಘಿಸಿದ್ದಾರೆ.

ಇಂದು ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನ ಆಚರಿಸಲಾಗುತ್ತಿದ್ದು, ಎಲ್ಲಾ ರೀತಿಯ ಮಾದಕವಸ್ತುಗಳ ವಿರುದ್ಧ ಶೂನ್ಯ-ಸಹಿಷ್ಣು ನೀತಿಯ ಬಗೆಗಿನ ತನ್ನ ಬದ್ಧತೆಯನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪುನರುಚ್ಚರಿಸುತ್ತದೆ ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನ’ ವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅನುಮತಿಯೊಂದಿಗೆ 1989 ರ ಜೂನ್‌ 26 ರಂದು ಮೊದಲು ಆರಂಭಿಸಲಾಯಿತು. ಮಾದಕ ದ್ರವ್ಯಗಳ ಬಳಕೆ ಮತ್ತು ಸಾಗಾಟದ ನಿಷೇಧವೇ ಈ ದಿನದ ಗುರಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.