ಡೆಲ್ಟಾ ಪ್ಲಸ್ ಗೆ ತಮಿಳುನಾಡಿನಲ್ಲಿ ಮೊದಲ ಬಲಿ, ಮದುರೈ ಮೂಲದ ಸೋಂಕಿತ ಸಾವು

ಮಾರಕ ಡೆಲ್ಟಾ ಪ್ಲಸ್ ರೂಪಾಂತರ ಸೋಂಕಿಗೆ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದ್ದು, ಮದುರೈ ಮೂಲದ ಸೋಂಕಿತರೊಬ್ಬರು ಸಾವನ್ನಪ್ಪಿದ್ದಾರೆ.
ಡೆಲ್ಟಾ ಪ್ಲಸ್ ಗೆ ತಮಿಳುನಾಡಿನಲ್ಲಿ ಮೊದಲ ಬಲಿ
ಡೆಲ್ಟಾ ಪ್ಲಸ್ ಗೆ ತಮಿಳುನಾಡಿನಲ್ಲಿ ಮೊದಲ ಬಲಿ

ಚೆನ್ನೈ: ಮಾರಕ ಡೆಲ್ಟಾ ಪ್ಲಸ್ ರೂಪಾಂತರ ಸೋಂಕಿಗೆ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದ್ದು, ಮದುರೈ ಮೂಲದ ಸೋಂಕಿತರೊಬ್ಬರು ಸಾವನ್ನಪ್ಪಿದ್ದಾರೆ.

ಈ ಬಗ್ಗೆ ತಮಿಳುನಾಡು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಮಧುರೈ ಮೂಲದ ಸೋಂಕಿತರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದು ತಮಿಳುನಾಡಿನಲ್ಲಿ ದಾಖಲಾದ ಮೊದಲ ಡೆಲ್ಟಾ ಪ್ಲಸ್ ರೂಪಾಂತರಿ ಸಾವಾಗಿದೆ.

ಡೆಲ್ಟಾ ಪ್ಲಸ್ ರೂಪಾಂತರಿ ದೇಶದಲ್ಲಿ ಕೋವಿಡ್-19 2ನೇ ಅಲೆಗೆ ಕಾರಣವಾಗಿದ್ದ ಡೆಲ್ಟಾ ರೂಪಾಂತರಿ ವೈರಸ್ ನ ವಂಶವಾಹಿಯಾಗಿದ್ದು, ಇದು ಡೆಲ್ಟಾಗಿಂತ ಅತ್ಯಂತ ಹೆಚ್ಚು ಅಪಾಯಕಾರಿಯಾಗಿದೆ. ಅಲ್ಲದೆ ಅತ್ಯಂತ ವೇಗದ ಪ್ರಸರಣ ಸಾಮರ್ಥ್ಯವನ್ನು ಕೂಡ ಹೊಂದಿದೆ ಎಂದು ತಜ್ಞರು ಹೇಳಿದ್ದಾರೆ. ಈಗಾಗಲೆ ಮಧ್ಯ ಪ್ರದೇಶದಲ್ಲಿ ಈ ರೂಪಾಂತರಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ ಓರ್ವ ರೋಗಿ ಸಾವನ್ನಪ್ಪಿದ್ದಾರೆ.

ಈ ಡೆಲ್ಟಾ ಪ್ಲಸ್ ಮಾನವರ ರೋಗನಿರೋಧಕ ಸಾಮರ್ಥ್ಯದ ಮೇಲೂ ದಾಳಿ ರೋಗನಿರೋಧಕ ಶಕ್ತಿಯನ್ನು ಕುಂದಿಸುತ್ತದೆ. ಲಸಿಕೆಯಿಂದ ಪಡೆದ ರೋಗನಿರೋಧಕ ಶಕ್ತಿ ಮತ್ತು ಸೋಂಕು ಬಂದು ಗುಣಮುಖರಾದಾಗ ಬಂದ ರೋಗ ನಿರೋಧಕ ಶಕ್ತಿಯ ಮೇಲೂ ಕೂಡ ಡೆಲ್ಟಾ ಪ್ಲಸ್ ದಾಳಿ ಮಾಡುತ್ತದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. 

ಇನ್ನು ತಮಿಳುನಾಡಿನಲ್ಲಿ ಈ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಕಾಣಿಸಿಕೊಂಡ ಮೂರು ಸೋಂಕು ಪ್ರಕರಣಗಳ ಪೈಕಿ ಇಬ್ಬರು ಸೋಂಕಿತರು ಗುಣಮುಖರಾಗಿದ್ದಾರೆ. ಈ ಇಬ್ಬರ ಪೈಕಿ ಚೆನ್ನೈನ 32 ವರ್ಷದ ನರ್ಸ್ ಮತ್ತು ಕಾಂಚೀಪುರಂ ಜಿಲ್ಲೆಯ ಇನ್ನೊಬ್ಬ ವ್ಯಕ್ತಿ ಸೇರಿದ್ದಾರೆ. ಅಂತೆಯೇ ಮದುರೈ ಮೂಲದ  ಸೋಂಕಿತರ ಪೈಕಿ ಓರ್ವ ರೋಗಿ ಡೆಲ್ಟಾ ಪ್ಲಸ್ ಸೋಂಕಿಗೆ ತುತ್ತಾಗಿರುವುದು ಕಂಡುಬಂದಿದೆ. ಹೀಗಾಗಿ ಇತರರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಮಿಳುನಾಡಿನ ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾ ಸುಬ್ರಮಣಿಯನ್ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕಿತರ ಸಂಖ್ಯೆ 21, 1 ಸಾವು
ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದ್ದು, ಶುಕ್ರವಾರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಜತೆಗೆ, ಅಗತ್ಯಕ್ಕೆ ಅನುಗುಣವಾಗಿ ಕಠಿಣ ನಿರ್ಬಂಧಗಳನ್ನು  ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೋವಿಡ್ -19 ಸೋಂಕಿನ ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದಾಗಿ ರತ್ನಾಗಿರಿ ಜಿಲ್ಲೆಯಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ’ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com