ದೇಶ

ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಮಾಜಿ ಪೊಲೀಸ್ ವಿಶೇಷಾಧಿಕಾರಿ, ಪತ್ನಿ, ಪುತ್ರಿ ಹತ್ಯೆಗೈದ ಉಗ್ರರು!

ಜಮ್ಮು-ಕಾಶ್ಮೀರ: ಮನೆಗೆ ನುಗ್ಗಿ ಮಾಜಿ ಪೊಲೀಸ್ ವಿಶೇಷಾಧಿಕಾರಿ, ಪತ್ನಿ, ಪುತ್ರಿ ಹತ್ಯೆಗೈದ ಉಗ್ರರು!
ಘಟನಾ ಸ್ಧಳದಲ್ಲಿರುವ ಭದ್ರತಾ ಪಡೆಗಳು
Published On :

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮಾಜಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ನುಗ್ಗಿದ ಉಗ್ರರು, ಅಧಿಕಾರಿ ಮತ್ತು ಅವರ ಪತ್ನಿ, ಪುತ್ರಿ ಯನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಆವಂತಿಪೋರಾದ ಹರಿಪರಿಗಂ ನಿವಾಸಿಯಾದ ಫಯಾಜ್ ಅಹಮದ್ ಅವರ ಮನೆಗೆ ರಾತ್ರಿ ಸುಮಾರು 11 ಗಂಟೆಗೆ ನುಗ್ಗಿದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫಯಾಜ್ ಅಹಮದ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಗಂಭೀರವಾಗಿ ಗಾಯಗೊಂಡಿದ್ದ ಫಯಾಜ್ ಅವರ ಪತ್ನಿ ರಜಾ ಬೇಗಮ್  ಹಾಗೂ ಅವರ ಪುತ್ರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ಉಗ್ರನ ಹತ್ಯೆ
ಈ ನಡುವೆ ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.