ಜಮ್ಮು-ಕಾಶ್ಮೀರ: ಭಾರತೀಯ ಸೇನೆಯಿಂದ ಉನ್ನತ ಎಲ್ಇಟಿ ಕಮಾಂಡರ್ ಬಂಧನ!

ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ನಾಗರಿಕರ ಮೇಲೆ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಲಷ್ಕರ್-ಎ-ತೈಬಾ(ಎಲ್‌ಇಟಿ) ಕಮಾಂಡರ್ ನದೀಮ್ ಅಬ್ರಾರ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ನಾಗರಿಕರ ಮೇಲೆ ಹಲವಾರು ದಾಳಿಗಳಲ್ಲಿ ಭಾಗಿಯಾಗಿರುವ ಲಷ್ಕರ್-ಎ-ತೈಬಾ(ಎಲ್‌ಇಟಿ) ಕಮಾಂಡರ್ ನದೀಮ್ ಅಬ್ರಾರ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮುವಿನ ಭಾರತೀಯ ವಾಯುಪಡೆ ನೆಲೆ ಮೇಲೆ ಡ್ರೋನ್ ಬಳಸಿ ದಾಳಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಉನ್ನತ ಎಲ್ಇಟಿ ಕಮಾಂಡರ್ ನದೀಮ್ ಅಬ್ರಾರ್ ನನ್ನು ಬಂಧಿಸಲಾಗಿದೆ. 

ನದೀಮ್ ಅಬ್ರಾರ್ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದು ಆತನ ಬಂಧನ ನಮಗೆ ದೊಡ್ಡ ಯಶಸ್ಸು ಎಂದು ಐಜಿಪಿ ಕಾಶ್ಮೀರ ವಲಯ ವಿಜಯ್ ಕುಮಾರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅಬ್ರಾರ್ ಬಂಧನದ ಬಗ್ಗೆ ಯಾವುದೇ ವಿವರಗಳನ್ನು ನೀಡದಿದ್ದರೂ, ನಗರದ ಹೊರವಲಯದಲ್ಲಿರುವ ಪರಿಂಪೋರಾದ ಚೆಕ್‌ಪಾಯಿಂಟ್‌ನಲ್ಲಿ ಭದ್ರತಾ ಪಡೆಗಳು ಅಬ್ರಾರ್ ಮತ್ತು ಇನ್ನೊಬ್ಬ ಶಂಕಿತನನ್ನು ಬಂಧಿಸಿವೆ ಅವರ ಬಳಿಯಿದ್ದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರ ಪ್ರಕಾರ, ಈ ವರ್ಷದ ಆರಂಭದಲ್ಲಿ ಲಾವೇಪೊರಾದಲ್ಲಿ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಅಬ್ರಾರ್ ಭಾಗಿಯಾಗಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com