ಶ್ರೀನಗರದಲ್ಲಿ ಎನ್'ಕೌಂಟರ್: ಎಲ್ಇಟಿ ಟಾಪ್ ಕಮಾಂಡರ್ ಅಬ್ರಾರ್ ಹತ್ಯೆ

ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಶ್ರೀನಗರ: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ. 

ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್‌ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್‌ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.

ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಈ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್‌ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com