ಮಮತಾ ಬ್ಯಾನರ್ಜಿ,ಪಿಣರಾಯ್, ಸ್ಟಾಲಿನ್ ಗೆ ರಾಜನಾಥ್‍ ಸಿಂಗ್ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಕ್ರಮವಾಗಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಎಲ್ ಡಿಎಫ್ ಮುಖಂಡ ಪಿಣರಾಯ್ ವಿಜಯನ್ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಅಭಿನಂದಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್
Updated on

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಕ್ರಮವಾಗಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಎಲ್ ಡಿಎಫ್ ಮುಖಂಡ ಪಿಣರಾಯ್ ವಿಜಯನ್ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಅಭಿನಂದಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಿರುವುದಕ್ಕೆ ಮಮತಾ ಬ್ಯಾನರ್ಜಿ ಅವರನ್ನು  ಅಭಿನಂದಿಸಿರುವ ರಾಜನಾಥ್ ಸಿಂಗ್, ಮಮತಾ ಬ್ಯಾನರ್ಜಿ ಅವರ ಮುಂದಿನ ಅವಧಿಗೆ ಶುಭ ಕೋರಿದ್ದಾರೆ.

ಕೇರಳದಲ್ಲಿ ಮತ್ತೆ ಎಲ್ ಡಿಎಫ್ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ಮುಂದಿನ ಅವಧಿಗೂ ಶುಭ ಹಾರೈಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷ ಗೆಲುವು ಸಾಧಿಸಿದ್ದಕ್ಕಾಗಿ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್
ಅವರಿಗೆ ಅಭಿನಂದನೆಗಳು, ಅವರಿಗೆ ಶುಭಾಶಯ ಕೋರುತ್ತೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com