ತಮಿಳುನಾಡು: ಸ್ಟಾಲಿನ್ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ
ಎಂ.ಕೆ ಸ್ಟಾಲಿನ್
ಎಂ.ಕೆ ಸ್ಟಾಲಿನ್

ಚೆನ್ನೈ: ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಮೇ. 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು ಮುಖ್ಯಮಂತ್ರಿಯಾಗಿ ಎಂ.ಕೆ ಸ್ಟಲಿನ್  ಪ್ರಮಾಣವಚನ ಸ್ವೀಕರಿಸಲಿದ್ದಾರೆ.

234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬಲ ಬೇಕಿದೆ. 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂಕೆ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ. ಕೊಲತೂರ್ ಕ್ಷೇತ್ರದಿಂದ ಸ್ಪರ್ಧಿಸಿರುವ ಸ್ಟಾಲಿನ್ 16,031 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com