ಮೆಟ್ರೋಮ್ಯಾನ್ ಇ.ಶ್ರೀಧರನ್
ದೇಶ
ಕೇರಳ ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೆಟ್ರೋಮ್ಯಾನ್ ಇ.ಶ್ರೀಧರನ್ ಮುನ್ನಡೆ
ಕೇರಳದ 140 ಸ್ಥಾನಗಳಿಗೆ ನಡೆದಿರುವ ಮತದಾನದ ಮತಎಣಿಕೆ ಪ್ರಕ್ರಿಯೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೆಟ್ರೋಮ್ಯಾನ್ ಎಂದು ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಇ.ಶ್ರೀಧರನ್ ಪಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ತಿರುವಂತಪುರ: ಕೇರಳದ 140 ಸ್ಥಾನಗಳಿಗೆ ನಡೆದಿರುವ ಮತದಾನದ ಮತಎಣಿಕೆ ಪ್ರಕ್ರಿಯೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಮೆಟ್ರೋಮ್ಯಾನ್ ಎಂದು ಖ್ಯಾತಿ ಪಡೆದಿರುವ ಬಿಜೆಪಿ ಅಭ್ಯರ್ಥಿ ಇ.ಶ್ರೀಧರನ್ ಪಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಮತ ಎಣಿಕೆಯ ಆರಂಭಿಕ ಟ್ರೆಂಡ್ ಪ್ರಕಾರ ಶ್ರೀಧರನ್ ಮುನ್ನಡೆ ಕಾಯ್ದುಕೊಂಡಿದ್ದು, ಎರಡು ಬಾರಿ ಕಾಂಗ್ರೆಸ್ ಶಾಸಕರಾದ ಯೂತ್ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಫಿ ಪರಂಬಿಲ್ ಮತ್ತು ಸಿಪಿಐ-ಎಂನ ಸಿಪಿ ಪ್ರಮೋದ್ ವಿರುದ್ಧ ಮೆಟ್ರೋಮ್ಯಾನ್ ಸ್ಪರ್ಧಿಸಿದ್ದಾರೆ.
ಈಗಿರುವ ಟ್ರೆಂಡ್ ಹೀಗೆಯೇ ಮುಂದುವರೆದಿದ್ದೇ ಆದರೆ, ಪಲಕ್ಕಾಡ್ ನಲ್ಲಿ ಶ್ರೀಧರನ್ ಅವರು ಜಯಭೇರಿ ಬಾರಿವುದು ಖಚಿತ ಎಂದು ಹೇಳಲಾಗುತ್ತಿದೆ. ಈ ನಡುವೆ ಶ್ರೀಧರನ್ ಅವರ್ನು ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಣೆ ಮಾಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ