ತಮಿಳುನಾಡು: ನಟ ಕಮಲ್ ಹಾಸನ್ ಗೆ ಕೂದಲೆಳೆ ಅಂತರದ ಸೋಲು, 'ಕರ್ನಾಟಕ ಸಿಂಗಂ' ಅಣ್ಣಾಮಲೈಗೂ ಶಾಕ್

ತಮಿಳುನಾಡು ರಾಜಕಾರಣದಲ್ಲಿ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ತಮ್ಮ ಮೊದಲ ಪ್ರಯತ್ನದಲ್ಲಿ ವಿಫಲವಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.
ಕಮಲ್ ಹಾಸನ್ ಮತ್ತು ಅಣ್ಣಾಮಲೈ
ಕಮಲ್ ಹಾಸನ್ ಮತ್ತು ಅಣ್ಣಾಮಲೈ
Updated on

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ತಮ್ಮ ಮೊದಲ ಪ್ರಯತ್ನದಲ್ಲಿ ವಿಫಲವಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, ನಟ ಕಮಲ್ ಹಾಸನ್ ಅವರು ಬಿಜೆಪಿಯ ಅಭ್ಯರ್ಥಿ ವನತಿ ಶ್ರೀನಿವಾಸನ್ ವಿರುದ್ಧ ಕೇವಲ 1500ಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಆರಂಭದಲ್ಲಿ 2000 ಮತಗಳ ಅಂತರದ ಮುನ್ನಡೆ ಸಾಧಿಸಿದ್ದ ಕಮಲ್  ಹಾಸನ್ ಬಳಿಕ ತೀವ್ರ ಜಿದ್ದಾಜಿದ್ದಿನಿಂದಾಗಿ ಹಿನ್ನಡೆ ಅನುಭವಿಸಿದರು. 

ಇನ್ನು ಕೊಯಮತ್ತೂರು ದಕ್ಷಿಣ ಕ್ಷೇತ್ರವನ್ನು 2008 ರಲ್ಲಿ ವಿಧಾನಸಭಾ ಕ್ಷೇತ್ರವಾಗಿ ರಚಿಸಲಾಗಿತ್ತು. ಈ ಕ್ಷೇತ್ರವು ಎಐಎಡಿಎಂಕೆ ಪಕ್ಷದ ಆರ್ ದೊರೈಸಾಮಿ ಅವರ ಸ್ವಕ್ಷೇತ್ರವಾಗಿದ್ದು, 2011 ರಲ್ಲಿ ದೊರೈಸ್ವಾಮಿ ಅವರು ಇದೇ ಕ್ಷೇತ್ರದಿಂದ ಮೊದಲು ಶಾಸಕರಾಗಿ ಆಯ್ಕೆಯಾಗಿದ್ದರು. 2016 ರಲ್ಲಿ ಎಐಎಡಿಎಂಕೆ ಅಮ್ಮನ್  ಕೆ ಅರ್ಜುನನ್ ಅವರು ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 

ಕರ್ನಾಟಕ ಸಿಂಗಂ ಅಣ್ಣಾಮಲೈಗೂ ಶಾಕ್
ಇನ್ನು ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕರ್ನಾಟಕ ಸಿಂಗಂ ಖ್ಯಾತಿಯ ಅಣ್ಣಾಮಲೈ ಅವರು ಹಾಲಿ ಚುನಾವಣೆಯಲ್ಲಿ ಸೋಲಿನ ಶಾಕ್ ಗೆ ತುತ್ತಾಗಿದ್ದಾರೆ. ತಮಿಳುನಾಡಿನ ಅರವಕುರುಚ್ಚಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದ ಅಣ್ಣಾಮಲೈ ಅವರು ನಿರಾಸೆ ಅನುಭವಿಸಿದ್ದಾರೆ. ಇಲ್ಲಿ  ಡಿಎಂಕೆಯ ಎಲಾ ಇಳಂಗೊ ಜಯಗಳಿಸಿದ್ದು, ಅವರು 34832 ಮತಗಳನ್ನು ಪಡೆದರೆ ಅಣ್ಣಾಮಲೈ 29596 ಮತ ಗಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com