ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ: ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ವರದಿ ನೀಡುವಂತೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.
ನಿನ್ನೆಯಷ್ಟೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ. ಇದರ ಬೆನ್ನಲ್ಲೇ ನಿನ್ನೆ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲುತೂರಾಟವಾಗಿತ್ತು. ಈ ಹಿಂಸಾಚಾರದಲ್ಲಿ ಹಲವರು ಕಾರ್ಯಕರ್ತರು ಗಾಯಗೊಂಡಿದ್ದರು.
ಇದೀಗ ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಕೇಂದ್ರ ಗೃಹ ಇಲಾಖೆ ಈ ಸಂಬಂಧ ವಿವರವಾದ ವರದಿ ಸಲ್ಲಿಸುವಂತೆ ಬಂಗಾಳ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಕುರಿತು ಗೃಹ ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿದ್ದು, 'ಹೂಗ್ಲಿ ಜಿಲ್ಲೆಯ ಪಕ್ಷದ ಒಂದು ಕಚೇರಿಗೆ ಬೆಂಕಿ ಹಚ್ಚಲಾಗಿದೆ ಎಂದು ಬಿಜೆಪಿ ಆರೋಪಿಸಿದೆ ಮತ್ತು ಸುವೆಂದು ಅಧಿಕಾರಿಯನ್ನೂ ಒಳಗೊಂಡಂತೆ ಅದರ ಕೆಲವು ನಾಯಕರ ಮೇಲೆ ರಾಜ್ಯದ ಇತರ ಭಾಗಗಳಲ್ಲಿ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಹೇಳಿದೆ.
ಈ ಬಗ್ಗೆ ನಿನ್ನೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಬೆಂಬಲಿಗರನ್ನು ಶಾಂತಿ ಕಾಪಾಡಿಕೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ಪ್ರಚೋದನೆಗಳಿಗೆ ಬಲಿಯಾಗದಂತೆ ಕೇಳಿಕೊಂಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ