ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನೀಟ್-ಪಿಜಿ ಪರೀಕ್ಷೆಗಳು ಮುಂದೂಡಿಕೆ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

ನವದೆಹಲಿ: ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.

100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.

Related Stories

No stories found.

Advertisement

X
Kannada Prabha
www.kannadaprabha.com