ಫೆ.24ರ ಒಪ್ಪಂದದ ನಂತರ ಇದೇ ಮೊದಲ ಬಾರಿಗೆ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರಿಂದ ಗುಂಡಿನ ದಾಳಿ

ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.
ಭಾರತೀಯ ಸೇನೆ
ಭಾರತೀಯ ಸೇನೆ
Updated on

ಶ್ರೀನಗರ: ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಸೋಮವಾರ ಬೆಳಿಗ್ಗೆ ಕದನ ವಿರಾಮ ಉಲ್ಲಂಘಿಸಿ ಬಿಎಸ್‌ಎಫ್ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 

ಬೆಳಿಗ್ಗೆ 6.15 ರ ಸುಮಾರಿಗೆ ಪಾಕಿಸ್ತಾನ ರೇಂಜರ್ಸ್ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ರಾಮಗರ್ ಸೆಕ್ಟರ್‌ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯ ಯೋಧರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ.

ಫೆಬ್ರವರಿ 25ರಂದು ಭಾರತ ಮತ್ತು ಪಾಕಿಸ್ತಾನಗಳು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತಮ್ಮ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ, ನವೆಂಬರ್ 2003ರ ಗಡಿ ಕದನ ವಿರಾಮ ಒಪ್ಪಂದವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಭಯ ದೇಶಗಳು ಸಮ್ಮತಿಸಿದ್ದವು ಎಂದು ತಿಳಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com