ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಂಪೂರ್ಣ ಲಾಕ್‌ಡೌನ್‌ ಅಗತ್ಯ; ಏಮ್ಸ್‌ ನಿರ್ದೇಶಕ ಗುಲೇರಿಯಾ

ಸಂಪೂರ್ಣ ಲಾಕ್‌ಡೌನ್‌ ಜಾರಿಯಿಂದ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಬಹುದು  ಎಂದು ಏಮ್ಸ್‌ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.
ಏಮ್ಸ್ ನಿರ್ದೇಶಕ ಡಾ ಗುಲೇರಿಯಾ
ಏಮ್ಸ್ ನಿರ್ದೇಶಕ ಡಾ ಗುಲೇರಿಯಾ
Updated on

ನವದೆಹಲಿ: ಸಂಪೂರ್ಣ ಲಾಕ್‌ಡೌನ್‌ ಜಾರಿಯಿಂದ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಬಹುದು  ಎಂದು ಏಮ್ಸ್‌ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಮಂಗಳವಾರ ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಮಾತನಾಡಿದ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ, ದೇಶದಲ್ಲಿ ದಿನ ದಿನಕ್ಕೂ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳು, ಸಾವುಗಳಿಂದ ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಹೆಚ್ಚಿನ  ಸಂಖ್ಯೆಯ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಪ್ರಸ್ತುತ ಕೊರೊನಾ ತಡೆಗೆ ಸರ್ಕಾರಗಳು ಕೈಗೊಂಡಿರುವ ಕ್ರಮಗಳು ಯಾವುದೇ ಫಲಶೃತಿ ನೀಡುತ್ತಿಲ್ಲ. ಪ್ರಸ್ತುತ ವಿಧಿಸಿರುವ ಕ್ರಮಗಳು ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ಸಫಲವಾಗಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. 

ರಾತ್ರಿ ಕರ್ಫ್ಯೂ, ವಾರಾಂತ್ಯದ ಲಾಕ್‌ಡೌನ್‌ ಯಾವುದೇ ಪ್ರಯೋಜನವಾಗಿಲ್ಲ. ಕೊರೊನಾ ಪ್ರಸರಣ ತಡೆಯಲು ಸಾಧ್ಯವಾಗಿಲ್ಲ. ಪ್ರಸ್ತುತ ಅವರಿಸಿರುವ ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಂಪೂರ್ಣ ಲಾಕ್‌ಡೌನ್‌ ನಿಂದ ಕೊರೊನಾ ಪ್ರಕರಣಗಳನ್ನು ತಗ್ಗಿಸಲು ಅನುಕೂಲವಾಗುತ್ತದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಮೂರನೇ ಅಲೆಗೆ ಸಿದ್ಧರಾಗಿರಿ
ಇದೇ ವೇಳೆ ಕೊರೊನಾ ಮೂರನೇ ಅಲೆಗೂ ಜನರು ಸಿದ್ಧವಾಗಿರುವಂತೆ ಏಮ್ಸ್‌ ನಿರ್ದೇಶಕರು ಇದೇ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಕಠಿಣ ಕ್ರಮಗಳನ್ನು ಕೈಗೊಂಡರೆ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಬಹುದು. ಜನರ ಆರೋಗ್ಯ ದೃಷ್ಟಿಯಿಂದ ‘ಆಡಳಿತಗಾರರು ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳನ್ನು  ತೆಗೆದುಕೊಳ್ಳಬೇಕು. ಲಾಕ್‌ಡೌನ್ ಕೆಲವು ಪ್ರದೇಶಗಳಿಗೆ ಸೀಮಿತವಾಗಿದ್ದರೆ, ದೇಶದ ಪರಿಸ್ಥಿತಿ ಅಮೆರಿಕದಂತೆಯೇ ಇರಲಿದೆ.

ಲಾಕ್‌ಡೌನ್‌ನಂತಹ ನಿರ್ಧಾರ ಕೈಗೊಳ್ಳುವಾಗ ಜನರ ದೈನಂದಿನ ಅವಶ್ಯಕತೆಗಳು ಹಾಗೂ ದಿನಗೂಲಿ ಕಾರ್ಮಿಕರ ಅವಶ್ಯಕತೆಗಳ ಬಗ್ಗೆ ಯೋಚಿಸಬೇಕು. ನಿಗದಿತ ಅವಧಿಗೆ ಲಾಕ್‌ಡೌನ್  ವಿಧಿಸಬೇಕು. ಕನಿಷ್ಠ ಎರಡು ವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಬೇಕು ಎಂದು ರಣದೀಪ್‌ ಗುಲೇರಿಯಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com