ರಾಜ್ಯಗಳಲ್ಲಿ ಇನ್ನೂ 94 ಲಕ್ಷ ಕೋವಿಡ್-19 ಲಸಿಕೆ ಲಭ್ಯವಿದೆ: ಕೇಂದ್ರ ಆರೋಗ್ಯ ಸಚಿವಾಲಯ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 94.47 ಲಕ್ಷ ಕೋವಿಡ್‌–19 ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 36 ಲಕ್ಷಗಳಷ್ಟು ಡೋಸ್‌ಗಳನ್ನು ಸರಬರಾಜು ಮಾಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 94.47 ಲಕ್ಷ ಕೋವಿಡ್‌–19 ಲಸಿಕೆಯ ಡೋಸ್‌ಗಳು ಲಭ್ಯವಿದೆ. ಮುಂದಿನ ಮೂರು ದಿನಗಳೊಳಗೆ ಹೆಚ್ಚುವರಿಯಾಗಿ 36 ಲಕ್ಷಗಳಷ್ಟು ಡೋಸ್‌ಗಳನ್ನು ಸರಬರಾಜು ಮಾಡಲಾಗುವುದು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಹೇಳಿದೆ.

ಕೇಂದ್ರ ಸರ್ಕಾರವು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯ 17.02 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಿದೆ ಎಂದು ತಿಳಿಸಿದೆ.

‘ಸದ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ ಲಸಿಕೆಯ 94,47,614 ಡೋಸ್‌ಗಳು ಲಭ್ಯವಿದೆ. ವ್ಯರ್ಥದ ಪ್ರಮಾಣವೂ ಸೇರಿದಂತೆ ಈವರೆಗೆ ಒಟ್ಟು 16 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಬಳಸಲಾಗಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 16,04,94,188 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com