ಕೇರಳದಲ್ಲಿ ಮೇ 8 ರಿಂದ 16 ರವರೆಗೆ ಸಂಪೂರ್ಣ ಲಾಕ್‌ಡೌನ್

ಕೊರೊನಾವೈರಸ್ ಪ್ರಕರಣಗಳು ತೀವ್ರವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 8 ರಿಂದ 16 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶ ಹೊರಡಿಸಿದ್ದಾರೆ.
ಪಿಣರಾಯಿ ವಿಜಯನ್
ಪಿಣರಾಯಿ ವಿಜಯನ್
Updated on

ತಿರುವನಂತಪುರಂ: ಕೊರೊನಾವೈರಸ್ ಪ್ರಕರಣಗಳು ತೀವ್ರವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮೇ 8 ರಿಂದ 16 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶ ಹೊರಡಿಸಿದ್ದಾರೆ.

ಶನಿವಾರ ಬೆಳಗ್ಗೆ 6 ಗಂಟೆಯಿಂದ ಲಾಕ್‌ಡೌನ್ ಜಾರಿಗೆ ಬರಲಿದೆ. ಮುಖ್ಯಮಂತ್ರಿಯ ನಿರ್ದೇಶನದ ಮೇರೆಗೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು 1000 ಟನ್ ಆಮದು ಮಾಡಿದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‌ಎಂಒ) ನೀಡಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ರಾಜ್ಯಕ್ಕೆ ಕನಿಷ್ಠ 1000 ಟನ್ ಆಮದು ಮಾಡಿದ ಆಮ್ಲಜನಕದ ಅಗತ್ಯವಿದೆ. ರಾಜ್ಯದಲ್ಲಿ ದ್ರವ ವೈದ್ಯಕೀಯ ಆಮ್ಲಜನಕದ ಒಟ್ಟಾರೆ ಯೋಜಿತ ಅವಶ್ಯಕತೆ ಹೆಚ್ಚಾಗುತ್ತಿರುವುದರಿಂದ, ರಾಜ್ಯದೊಳಗಿನ ಬಫರ್ ಸಂಗ್ರಹಣೆಯನ್ನು ತುರ್ತಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಪಿಣರಾಯಿ ತಿಳಿಸಿದ್ದಾರೆ.

ವಿದೇಶಾಂಗ ಸಚಿವಾಲಯವು ಅಗತ್ಯವಿರುವ ಪ್ರಮಾಣವನ್ನು ಹಂಚಿಕೆ ಮಾಡಲು ಸಲಹೆ ನೀಡಬೇಕೆಂದು ಪ್ರಧಾನಿಯನ್ನು ವಿನಂತಿಸಿದ್ದೇವೆ. ಹತ್ತಿರದ ಉಕ್ಕಿನ ಸ್ಥಾವರದಿಂದ ರಾಜ್ಯಕ್ಕೆ 500 ಮೆಟ್ರಿಕ್ ಟನ್ ಎಲ್ಎಂಒ ಹಂಚಿಕೆ ಮಾಡಲು ಸಲಹೆ ನೀಡುವಂತೆ ಕೂಡ ಕೋರಲಾಗಿದೆ ಎಂದರು.

ಕೇರಳದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,857 ಐಸಿಯು ಹಾಸಿಗೆಗಳಿವೆ. ಇದರಲ್ಲಿ 996 ಹಾಸಿಗೆಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಮತ್ತು 756 ಹಾಸಿಗೆಗಳನ್ನು ಕೋವಿಡ್ ಅಲ್ಲದ ರೋಗಿಗಳಿಗೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು ಶೇ. 38.7ರಷ್ಟು ಐಸಿಯು ಹಾಸಿಗೆಗಳು ಇನ್ನೂ ಲಭ್ಯವಿವೆ. ಖಾಸಗಿ ಆಸ್ಪತ್ರೆಗಳಲ್ಲಿ 7,085 ಐಸಿಯು ಹಾಸಿಗೆಗಳಿವೆ ಮತ್ತು ಪ್ರಸ್ತುತ 1,037 ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಸ್ತುತ 2,293 ವೆಂಟಿಲೇಟರ್‌ಗಳ ಲಭ್ಯವಿದೆ. ಈ ಪೈಕಿ 441 ವೆಂಟಿಲೇಟರ್‌ಗಳನ್ನು ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಮತ್ತು 185 ಕೋವಿಡ್ ಅಲ್ಲದ ರೋಗಿಗಳಿಗೆ ಬಳಸಲಾಗುತ್ತಿದೆ ಎಂದರು.

ಜೊತೆಗೆ, 50 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು 25 ಲಕ್ಷ ಡೋಸ್ ಕೋವಾಕ್ಸಿನ್ ಲಸಿಕೆಗಳನ್ನು ಅನ್ನು ಕೇರಳಕ್ಕೆ ಮಂಜೂರು ಮಾಡುವಂತೆ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com