ಮುಂಬೈ: ದೇಶದ ಐಎನ್ ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಶನಿವಾರ ಬೆಳಗ್ಗೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿರುವುದಾಗಿ ನೌಕಪಡೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ಯುದ್ಧ ನೌಕೆಯ ನಾವಿಕರು ವಸತಿ ಹೊಂದಿರುವ ಭಾಗದಿಂದ ಹೊಗೆ ಬರುತ್ತಿದ್ದನ್ನು ಕರ್ತವ್ಯ ನಿರತ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುದ್ಧ ನೌಕೆಯಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ವಿಚಾರಣೆಗೆ ಆದೇಶಿಸಲಾಗಿದೆ. ಯುದ್ಧ ನೌಕೆ ಇದೀಗ ಬಂದರಿನಲ್ಲಿರುವುದಾಗಿ ವಕ್ತಾರರು ತಿಳಿಸಿದ್ದಾರೆ.
Advertisement