ರಿಷಿಕೇಶ ಏಮ್ಸ್ ನ 100ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ಕೊರೋನಾ ಪಾಸಿಟಿವ್

ರಿಷಿಕೇಶದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯಲ್ಲಿ 100ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಿಷಿಕೇಶ: ರಿಷಿಕೇಶದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯಲ್ಲಿ 100ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಏಮ್ಸ್ ನಲ್ಲಿ ಒಟ್ಟು 110 ವೈದ್ಯರು ಮತ್ತು ನರ್ಸ್ ಗಳಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಅವರೆಲ್ಲರಿಗೂ ಲಸಿಕೆ ನೀಡಲಾಗಿದೆ ಎಂದು ಏಮ್ಸ್ ನ ಪ್ರೊ ಹರೀಶ್ ಥಪ್ಲಿಯಲ್ ತಿಳಿಸಿದ್ದಾರೆ.

ಪ್ರತಿದಿನ ಕೋವಿಡ್ ರೋಗಿಗಳೊಂದಿಗೆ ನೇರ ಸಂಪರ್ಕದಲ್ಲಿರುವುದರಿಂದ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಗೆ ಪಾಸಿಟಿವ್ ಬರಲು ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

ಇಲ್ಲಿ ಮೀಸಲಾದ ಕೋವಿಡ್ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ವಿಜಯೇಶ್ ಭರದ್ವಾಜ್ ಕೂಡ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com