ಅಹಮದಾಬಾದ್: ಕೋವಿಡ್-19 ಸೋಂಕಿಗೆ ತುತ್ತಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರ ತಂದೆ ಭಾನುವಾರ ಮೃತಪಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.
ತದ ನಂತರ, ಮುಖ್ಯಮಂತ್ರಿ ವಿಜಯ್ ರೂಪಾನಿ ಪಟೇಲ್ ಜೊತೆಗೆ ಫೋನ್ ನಲ್ಲಿ ಮಾತನಾಡಿ ಸಂತಾಪ ಸೂಚಿಸಿದ್ದಾರೆ ಎಂದು
ಸರ್ಕಾರದ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.
ಅಹಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಕೋವಿಡ್-19 ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಹಾರ್ದಿಕ್ ಪಟೇಲ್ ಅವರ ತಂದೆ ಭರತ್ ಪಟೇಲ್ ಭಾನುವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ಭಾರತೀಯ ಯುವ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ನಿಖಿಲ್ ಸವಾನಿ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
Advertisement