ಕೋವಿಡ್-19: ತೆಲಂಗಾಣದಲ್ಲಿ ನಾಳೆಯಿಂದ ಹತ್ತು ದಿನ ಲಾಕ್‌ಡೌನ್ ಘೋಷಣೆ

ನೆರೆಯ ತೆಲಂಗಾಣದಲ್ಲೂ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 12 ರಂದು (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಪ್ರಾರಂಭವಾಗಿ ಹತ್ತು ದಿನಗಳವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ವಿಧಿಸಲು ತೆಲಂಗಾಣ ಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಹೈದರಾಬಾದ್: ನೆರೆಯ ತೆಲಂಗಾಣದಲ್ಲೂ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 12 ರಂದು (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಪ್ರಾರಂಭವಾಗಿ ಹತ್ತು ದಿನಗಳವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ವಿಧಿಸಲು ತೆಲಂಗಾಣ ಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಈ ಬಗ್ಗೆ ನಿರ್ಧಾರ ಕೈಗೊಂಡಿದೆ.

ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಈ ಮಧ್ಯೆ, ಕೋವಿಡ್-19 ಲಸಿಕೆಗಳನ್ನು ಖರೀದಿಸಲು ಜಾಗತಿಕ ಟೆಂಡರ್ಗಳನ್ನು ಆಹ್ವಾನಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com