ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 3.62 ಲಕ್ಷ ಹೊಸ ಸೋಂಕು ಪ್ರಕರಣ ವರದಿ, 4,120 ಮಂದಿ ಸಾವು!

ದೇಶಾದ್ಯಂತ ಮತ್ತೆ 3.62 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4,120 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶಾದ್ಯಂತ ಮತ್ತೆ 3.62 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 4,120 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,62,727 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,37,03,665ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,120 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ  2,58,317ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,52,181 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 1,97,34,823 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 37,10,525 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 18,64,594 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 30,94,48,585ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 17,72,14,256 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com