ಕೊರೋನಾದಿಂದ ಪೋಷಕರ ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥರಿಗೆ ಪಿಂಚಣಿ: ಮಧ್ಯಪ್ರದೇಶ ಸರ್ಕಾರ ಘೋಷಣೆ

 ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಮಧ್ಯಪ್ರದೇಶ ಸರ್ಕಾರವು ಉಚಿತ ಶಿಕ್ಷಣ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಿಳಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್
ಶಿವರಾಜ್ ಸಿಂಗ್ ಚೌಹಾಣ್
Updated on

ಭೋಪಾಲ್: ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಮಧ್ಯಪ್ರದೇಶ ಸರ್ಕಾರವು ಉಚಿತ ಶಿಕ್ಷಣ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡಲಿದೆ ಎಂದು ಮುಖ್ಯಮಂತ್ರಿಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಿಳಿಸಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ತಮ್ಮ ಸರ್ಕಾರ ಕಾಳಜಿ ವಹಿಸಲಿದೆ ಎಂದು ಸಿಎಂ ಭರವಸೆ ನೀಡಿದರು. ಹೊಸದಾಗಿ ಉದ್ಯಮ ವ್ಯವಹಾರಗಳನ್ನು ಪ್ರಾರಂಭಿಸಲು ಬಡ್ಡಿರಹಿತ ಸಾಲ ಪಡೆಯುವವರಿಗೆ ರಾಜ್ಯ ಸರ್ಕಾರವು ಗ್ಯಾರಂಟಿಯಾಗಿ ನಿಲ್ಲುತ್ತದೆ ಎಂದು ಚೌಹಾಣ್ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ಶಿಕ್ಷಣವನ್ನು ಉಚಿತವಾಗಿ ನೀಡುತ್ತೇವೆ. ಅವರು ಉಚಿತ ಪಡಿತರವನ್ನೂ ಪಡೆಯಲಿದ್ದಾರೆ." ಕೋವಿಡ್ -19 ಸಾಂಕ್ರಾಮಿಕವು ಅನೇಕ ಕುಟುಂಬಗಳನ್ನು ಘಾಸಿಗೊಳಿಸಿದೆ ಎಂದು ಅವರು ನುಡಿದರು. ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡಿದ್ದಾರೆ, ಆದರೆ ಹಿರಿಯರು, ವೃದ್ದರು  ಏಕಾಂಗಿಯಾಗಿರುವುದರಿಂದ ಅವರನ್ನು ನೋಡಿಕೊಳ್ಳುವವರು ಇಲ್ಲವಾಗಿದ್ದಾರೆ. "ನಮ್ಮ ಸರ್ಕಾರವು ಅಂತಹ ಮಕ್ಕಳು ಮತ್ತು ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುತ್ತದೆ ಮತ್ತು ಅವರಿಗೆ ತಿಂಗಳಿಗೆ 5,000 ರೂ. ಪಿಂಚಣಿ ನೀಡುತ್ತದೆ" ಎಂದು ಚೌಹಾಣ್ ಹೇಳಿದರು.

ಅನೇಕ ವೃದ್ದರು, ಹಿರಿಯರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ ಮತ್ತು ಅವರು ಬದುಕುಳಿಯಲು ಹೆಣಗಾಡುತ್ತಿದ್ದಾರೆ. "ನಾವು ಅಂತಹ ವ್ಯಕ್ತಿಗಳನ್ನು ಬಿಟ್ಟುಬಿಡಲು ಸಾಧ್ಯವಿಲ್ಲ. ಅವರು ಈಗ ಮಧ್ಯಪ್ರದೇಶ ಸರ್ಕಾರದ ಜವಾಬ್ದಾರಿಯಲ್ಲಿ ಇರುತ್ತಾರೆ." ಪೋಷಕರನ್ನು ಕಳೆದುಕೊಂಡಿರುವ ಮಕ್ಕಳು ತಮ್ಮ ಜೀವನದ ಬಗ್ಗೆ ಚಿಂತಿಸಬಾರದು ಎಂದು ಚೌಹಾಣ್ ಹೇಳಿದರು. "ಅವರು ರಾಜ್ಯದ ಮಕ್ಕಳು ಮತ್ತು ಸರ್ಕಾರ  ಅವರನ್ನು ನೋಡಿಕೊಳ್ಳುತ್ತದೆ" ಎಂದು ಮುಖ್ಯಮಂತ್ರಿ ಹೇಳಿದರು.

ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ ಮಕ್ಕಳು ಮತ್ತು ವಯಸ್ಸಾದ ಜನರಿಗೆ ಇಂತಹ ಯೋಜನೆಯನ್ನು ಪ್ರಾರಂಭಿಸಿದ ದೇಶದ ಮೊದಲ ರಾಜ್ಯ ಮಧ್ಯಪ್ರದೇಶ  ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಬುಧವಾರ 8,970 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು  84 ಸಾವು ಸಂಭವಿಸಿದೆ.ಸೋಂಕಿನ ಪ್ರಮಾಣ 7,00,202 ಮತ್ತು ಸಾವಿನ ಸಂಖ್ಯೆ 6,679 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com