ಅತಿ ಹೆಚ್ಚು ಕೋವಿಡ್-19 ಪ್ರಕರಣಗಳಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ

ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. 
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ
Updated on

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ. 

ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿ ಭಾಗಿಯಾಗಲಿದ್ದಾರೆ ಹಾಗೂ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎರಡನೇ ಸಭೆಯಲ್ಲಿ ಭಾಗಿಯಾಗಲಿದ್ದಾರೆ. 

ಈ ಸಭೆಯಲ್ಲಿ ಆಯಾ ರಾಜ್ಯದ ಮುಖ್ಯಮಂತ್ರಿಗಳೂ ಭಾಗಿಯಾಗಲಿದ್ದಾರೆ. ಕೋವಿಡ್-19 ಪರಿಸ್ಥಿತಿಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಆಡಳಿತಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸುತ್ತಿದ್ದಾರೆ. 

2020 ರಲ್ಲಿ ಕೋವಿಡ್-19 ಪತ್ತೆಯಾದಾಗಿನಿಂದಲೂ ಈ ವರೆಗೂ ಪ್ರಧಾನಿಗಳು ಮುಖ್ಯಮಂತ್ರಿಗಳೊಂದಿಗೆ ಅಷ್ಟೇ ಸಭೆ ನಡೆಸುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com