ಯುಪಿಎಸ್ ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ. 

ಭಾರತೀಯ ನಾಗರಿಕ ಸೇನೆ (ಐಎಎಸ್) ಭಾರತೀಯ ವಿದೇಶಾಂಗ ಸೇವೆ (ಐಎಫ್ ಎಸ್) ಭಾರತೀಯ ಪೊಲೀಸ್ ಸೇವೆ (ಐಎಫ್ಎಸ್) ಮತ್ತಿತರ ಅಧಿಕಾರಿಗಳ ಆಯ್ಕೆಗಾಗಿ ಪ್ರತಿವರ್ಷ ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಯುಪಿಎಸ್ ಸಿ ನಡೆಸುತ್ತದೆ.

ಆದರೆ, ಈ ಬಾರಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಅಕ್ಟೋಬರ್ 10 ರಂದು ಪ್ರಿಲಿಮಿನರಿ ಪರೀಕ್ಷೆ ನಡೆಸಲಾಗುವುದು ಎಂದು ಯುಪಿಎಸ್ ಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com