ರೈಲ್ವೆಯಿಂದ ವಿವಿಧ ರಾಜ್ಯಗಳಿಗೆ ಈವರೆಗೆ 7,900 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು
ನವದೆಹಲಿ: ಕಳೆದ 20 ದಿನಗಳಲ್ಲಿ 500 ಟ್ಯಾಂಕರ್‌ಗಳಲ್ಲಿ ಸುಮಾರು 7,900 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು 12 ರಾಜ್ಯಗಳಿಗೆ ತಲುಪಿಸಲಾಗಿದೆ ಎಂದು ಭಾರತೀಯ ರೈಲ್ವೆ ಶುಕ್ರವಾರ ತಿಳಿಸಿದೆ.
ಏಪ್ರಿಲ್ 24 ರಂದು ಮಹಾರಾಷ್ಟ್ರಕ್ಕೆ 126 ಮೆಟ್ರಿಕ್ ಟನ್ ಧ್ರವೀಕೃತ ಆಮ್ಲಜನಕ ಹೊತ್ತ ಮೊದಲ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಿತು. ಆ ನಂತರ 20 ದಿನಗಳಲ್ಲಿ ಪಶ್ಚಿಮದ ಹಪಾ ಮತ್ತು ಮುಂಡ್ರಾ, ರೂರ್ಕೆಲಾ, ದುರ್ಗಾಪುರ, ಟಾಟಾನಗರ, ಪೂರ್ವದ ಅಂಗುಲ್ ಮುಂತಾದ ಸ್ಥಳಗಳಿಂದ ಆಮ್ಲಜನಕವನ್ನು ಉತ್ತರಾಖಂಡ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ತಲುಪಿಸುತ್ತಿದೆ. ಸಕಾಲದಲ್ಲಿ ಆಮ್ಲಜನಕವನ್ನು ಸರಬರಾಜು ಮಾಡಲು ರೈಲ್ವೆ ವಿನೂತನ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ.
ಸವಾಲಿನ ಸನ್ನಿವೇಶಗಳಲ್ಲಿ ಸಾವಿರಾರು ಕಿಲೋ ಮೀಟರ್ ದೂರಕ್ಕೆ ಆಮ್ಲಜನಕ ತಲುಪಿಸುವುದು ಸಂಕೀರ್ಣ ಕಾರ್ಯಾಚರಣೆಯಾಗಿದ್ದು, ಈ ರೈಲುಗಳು ಯಾವುದೇ ಅಡೆತಡೆಯಿಲ್ಲದೆ, ಗಂಟೆಗೆ 55 ಕಿ.ಮೀಗೂ ಹೆಚ್ಚು ವೇಗದಲ್ಲಿ ಸುರಕ್ಷಿತವಾಗಿ ಸಾಗುತ್ತಿವೆ ಎಂದು ರೈಲ್ವೆ ತಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ