ನವದೆಹಲಿ: 'ನನ್ನನ್ನೂ ಬಂಧಿಸಿ' ರಾಹುಲ್ ಗಾಂಧಿ ಸವಾಲು!

ನವದೆಹಲಿ: ಕೋವಿಡ್-19 ಲಸಿಕೆ ರಫ್ತು ನೀತಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಫೋಸ್ಟರ್ ಅಂಟಿಸಿದ್ದ
ಹಲವರನ್ನು ಬಂಧಿಸಿರುವುದರ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮುಖಂಡರು, ಕೋವಿಡ್ ಲಸಿಕೆಯನ್ನು ಏಕೆ ವಿದೇಶಗಳಿಗೆ ಕಳುಹಿಸುತ್ತಿರಾ ಎಂದು
ಕೇಳುವ ಫೋಸ್ಟರ್ ನೊಂದಿಗೆ ಟ್ವಿಟರ್ ನಲ್ಲಿ ತಮ್ಮ ಪ್ರೊಫೈಲ್ ಚಿತ್ರವನ್ನು ಬದಲಾಯಿಸಿಕೊಂಡಿದ್ದಾರೆ. ಜನರಿಗೆ ಲಸಿಕೆ, ಔಷಧ
ಮತ್ತು ಆಕ್ಸಿಜನ್ ಸಿಗದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಠಿಣ ಪ್ರಶ್ನೆಗಳನ್ನು ಕೇಳಲಾಗುವುದು ಎಂದು ಪ್ರತಿಪಕ್ಷಗಳು
ಹೇಳಿವೆ.
ಮೋದಿ ಅವರೇ, ನಮ್ಮ ಮಕ್ಕಳ ಲಸಿಕೆಯನ್ನು ಏಕೆ ವಿದೇಶಕ್ಕೆ ಕಳುಹಿಸುತ್ತೀರಾ ಎಂದು ಕೇಳುವ ಫೋಸ್ಟರ್ ನಲ್ಲಿನ ಚಿತ್ರವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ ನನ್ನನ್ನೂ ಬಂಧಿಸಿ ಎಂದು ಸವಾಲು ಹಾಕಿದ್ದಾರೆ.
ಲಸಿಕೆ ವಿಚಾರವಾಗಿ ರಾಷ್ಟ್ರ ರಾಜಧಾನಿಯ ಹಲವೆಡೆ ಫೋಸ್ಟರ್ ಅಂಟಿಸಿದ್ದ ಆರೋಪದ ಮೇರೆಗೆ 24 ಜನರನ್ನು ದೆಹಲಿ ಪೊಲೀಸರು
ಬಂಧಿಸಿದ ನಂತರ ರಾಹುಲ್ ಗಾಂಧಿ ಈ ರೀತಿಯ ಸವಾಲು ಹಾಕಿದ್ದಾರೆ. ಇಂತಹ ಫೋಸ್ಟರ್ ಗಳನ್ನು ತನ್ನ ಮನೆಯ ಕಾಂಪೌಂಡ್ ಮೇಲೆ ಹಾಕುವುದಾಗಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


