ತೌಕ್ತೆ ಚಂಡಮಾರುತ: 'ಮಹಾ' ಪರಿಸ್ಥಿತಿ ಪರಿಶೀಲಿಸಿದ ಉದ್ಧವ್ ಠಾಕ್ರೆ, 12 ಸಾವಿರ ಜನರ ಸ್ಥಳಾಂತರ

ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರದಲ್ಲೂ ತೌಕ್ತೆ ಚಂಡಮಾರುತ ದೊಡ್ಡ ಅವಾಂತರ ಸೃಷ್ಟಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಮುಂಬೈ, ಥಾಣೆ ಮತ್ತು ಇತರೆ ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ಪರಿಶೀಲಿಸಿದರು. 

ಅಧಿಕೃತ ಹೇಳಿಕೆಯ ಪ್ರಕಾರ, ರಾಯಗಡ್ ದಲ್ಲಿ 3380 ರತ್ನಗಿರಿ ಜಿಲ್ಲೆಯಲ್ಲಿ 3896 ಹಾಗೂ ಸಿಂಧುದುರ್ಗ್ ದಲ್ಲಿ 144 ಮಂದಿ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ 12,420 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮುಂಬೈ, ಥಾಣೆ ಮತ್ತು ನೆರೆಯ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಠಾಕ್ರೆ ಪರಿಶೀಲಿಸಿದರು ಮತ್ತು ಚಂಡಮಾರುತದಿಂದಾಗಿ ಈ ಪ್ರದೇಶದ ಕೋವಿಡ್ ರೋಗಿಗಳ ಚಿಕಿತ್ಸೆಗೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಯಗಡ್ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮುಂಬೈ, ಥಾಣೆ ಮತ್ತು ಪಾಲ್ಘರ್ ಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಏತನ್ಮಧ್ಯೆ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಪತ್ತು ನಿರ್ವಹಣಾ ಕೋಶಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಸಂಗ್ರಹವನ್ನು ಪರಿಶೀಲಿಸಿದರು.

ಅಲ್ಲದೆ ರಾಜ್ಯದ ಎಲ್ಲಾ ಕರಾವಳಿ ಜಿಲ್ಲೆಗಳ ಆಡಳಿತ ಜಾಗರೂಕರಾಗಿರವಂತೆ ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com