ಛತ್ತೀಸ್‌ಗಢ: ನಕ್ಸಲರಿಂದ ಐಇಡಿ ಸ್ಫೋಟ, ಪೊಲೀಸ್ ಅಧಿಕಾರಿ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ನಡೆಸಿರುವ ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಸ್ಫೋಟದಲ್ಲಿ ಹೆಡ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ನಡೆಸಿರುವ ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಸ್ಫೋಟದಲ್ಲಿ ಹೆಡ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯ್‌ಪುರದಿಂದ 450 ಕಿ.ಮೀ ದೂರದಲ್ಲಿರುವ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾರ್ಯಗಳಿಗೆ ಭದ್ರತೆ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಐಇಡಿ ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ನಕ್ಸಲ್ ದಾಳಿಯಲ್ಲಿ ಹೆಡ್ ಕಾನ್ಸ್ಟೇಬಲ್ ಕಲೆಂದ್ರ ಪ್ರಸಾದ್ ನಾಯಕ್ ಸಾವನ್ನಪ್ಪಿದ್ದರೆ, ಸ್ಫೋಟದಲ್ಲಿ ಕಾನ್ಸ್ಟೇಬಲ್ ಕಮಲ್ ಠಾಕೂರ್ ಅವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಾಯಗೊಂಡ ಪೊಲೀಸ್ ಮತ್ತು ಹೆಡ್ ಕಾನ್‌ಸ್ಟೆಬಲ್‌ನ ಶವವನ್ನು ಬಿಜಾಪುರಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com