ಪಾಟ್ನಾ: ಪಾಟ್ನಾದ 1-ಪೊಲೊ ರಸ್ತೆಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ತಮ್ಮದೇ ಶಾಸಕರ ನಿಧಿಯಿಂದ ಪೂರ್ಣ ಪ್ರಮಾಣದ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿರುವುದಾಗಿ ಬಿಹಾರ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ.
ಕೋವಿಡ್ ಪಾಸಿಟಿವ್ ಬಂದಿರುವ ರೋಗಿಗಳು ಪಾಟ್ನಾದ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಮತ್ತು ಆಕ್ಸಿಜನ್ ಸಿಗದೆ ಹೆಣಗಾಡುತ್ತಿರುವುದರಿಂದ ತಾವು ಈ ನಿರ್ಧಾರ ತೆಗೆದುಕೊಂಡಿದ್ದಾಗಿ ತೇಜಶ್ವಿ ಯಾದವ್ ಹೇಳಿದ್ದಾರೆ.
ಪೊಲೊ ರಸ್ತೆಯಲ್ಲಿರುವ ನಿವಾಸದಲ್ಲಿರುವ ಬೆಡ್ ಗಳಿಗೆ ಆಕ್ಸಿಜನ್ ಅಳವಡಿಸಲಾಗಿದ್ದು ಜೊತೆ ಔಷಧಿಗಳ ಸಂಗ್ರಹವು ಇದೆ ಎಂದರು. ಇನ್ನು ಈ ಕೇಂದ್ರಕ್ಕೆ ತಮ್ಮ ಶಾಸಕರ ನಿಧಿಯಿಂದ ಬೆಡ್ ಮತ್ತು ಇತರ ಎಲ್ಲ ಸೌಲಭ್ಯಗಳನ್ನು ಹೊಂದಿಸಲಾಗಿದೆ. ಈಗ, ಇದನ್ನು ಪ್ರತ್ಯೇಕ ವಾರ್ಡ್ ಅಥವಾ ಕ್ವಾರಂಟೈನ್ ಕೇಂದ್ರವಾಗಿ ಬಳಸಿಕೊಳ್ಳಲು ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.
"ಇದು ಮಾತ್ರವಲ್ಲ, ಜವಾಬ್ದಾರಿಯುತ ಪ್ರತಿಪಕ್ಷವಾಗಿ, ರೋಗಿಗಳ ಚಿಕಿತ್ಸೆಗೆ ಅಗತ್ಯವಾದ ಯಾವುದೇ ವ್ಯವಸ್ಥೆಗಳನ್ನು ಬೆಂಬಲಿಸಲು ನಾವು ಸಿದ್ಧರಿದ್ದೇವೆ" ಎಂದು ಹೇಳಿದ ಅವರು ಈ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದಿದ್ದೇನೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತೇಜಸ್ವಿ ಹೇಳಿದರು.
Advertisement