ಕೋವಿಡ್‌ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ವಿಶೇಷ ಕಾರ್ಯಪಡೆ: ದೆಹಲಿ ಸಿಎಂ ಕೇಜ್ರೀವಾಲ್

ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಪ್ರಯತ್ನಗಳ ಭಾಗವಾಗಿ ಮಕ್ಕಳ ವೈದ್ಯರು, ತಜ್ಞರು ಮತ್ತು ಹಿರಿಯ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಪ್ರಯತ್ನಗಳ ಭಾಗವಾಗಿ ಮಕ್ಕಳ ವೈದ್ಯರು, ತಜ್ಞರು ಮತ್ತು ಹಿರಿಯ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

ದೆಹಲಿಯಲ್ಲಿ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಾಂಕ್ರಾಮಿಕ ರೋಗದ ಮೂರನೇ ಅಲೆಯನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆ ನಡೆಸಿದ ಮುಖ್ಯಮಂತ್ರಿ, ಹಾಸಿಗೆಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಆದ್ಯತೆ ನೀಡಬೇಕು. ಅದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸಬೇಕು ಎಂದು ಸಲಹೆ ನೀಡಿದರು.

ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಅತ್ಯುತ್ತಮವಾಗಿ ಪೂರೈಸಲು ಸಾಕಷ್ಟು ಆಮ್ಲಜನಕ ಟ್ಯಾಂಕರ್ ಗಳನ್ನು ಮೊದಲೇ ತಯಾರಿಸಲು ಮತ್ತು ಆಮ್ಲಜನಕ ಘಟಕಗಳ ಸರಿಯಾದ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಈ ಕುರಿತು ಟ್ವೀಟ್ ಮಾಡಿದ ದೆಹಲಿ ಸಿಎಂ, 'ಕೊರೋನಾದ ಮೂರನೇ ಅಲೆ ಹೊರಹೊಮ್ಮಿದರೆ, ಅದರ ವಿರುದ್ಧ ಹೋರಾಡಲು ನಾವು ಮೊದಲೇ ಸಿದ್ಧರಾಗಿರಬೇಕು, ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಇಂದು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ.

1. ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ವಿಶೇಷ ಕಾರ್ಯಪಡೆ ರಚಿಸುವುದು
2. ಸಾಕಷ್ಟು ಹಾಸಿಗೆಗಳು, ಆಮ್ಲಜನಕ ಮತ್ತು ಅಗತ್ಯ ಔಷಧಿಗಳ ಉತ್ತಮ ನಿರ್ವಹಣೆ' ಎಂದಿದ್ದಾರೆ.

ದೆಹಲಿಯಲ್ಲಿ 40,000 ಆಮ್ಲಜನಕ ಹಾಸಿಗೆಗಳನ್ನು ಸಿದ್ಧಪಡಿಸುವ ಅಗತ್ಯವಿರಬಹುದು ಮತ್ತು ದೆಹಲಿ ಸರ್ಕಾರವು 10,000 ಐಸಿಯು ಹಾಸಿಗೆಗಳನ್ನು ಸ್ಥಾಪಿಸಲು ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com