ಕಪ್ಪು ಶಿಲೀಂಧ್ರ ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ರ ಅಡಿಯಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಅನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ರ ಅಡಿಯಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಅನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಈ ಸೋಂಕು COVID-19 ರೋಗಿಗಳಲ್ಲಿ ದೀರ್ಘಕಾಲದ ಕಾಯಿಲೆ ಮತ್ತು ಮರಣಕ್ಕೆ ಕಾರಣವಾಗಿದೆ ಎಂದು ಕೇಂದ್ರ ಹೇಳಿದೆ.

ಈ ಸಂಬಂಧ  ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ರಾಜ್ಯಗಳಿಗೆ ಪತ್ರ ಬರೆದಿದ್ದು, ಇತ್ತೀಚಿನ ದಿನಗಳಲ್ಲಿ ಮ್ಯೂಕೋರ್ಮೈಕೋಸಿಸ್ ಎಂಬ ಶಿಲೀಂಧ್ರ ಸೋಂಕಿನ ರೂಪದಲ್ಲಿ ಹೊಸ ಸವಾಲಾಗಿ ಹೊರಹೊಮ್ಮಿದೆ ಮತ್ತು ಕೋವಿಡ್ ರೋಗಿಗಳಲ್ಲಿ ಅನೇಕ ರಾಜ್ಯಗಳಿಂದ ವರದಿಯಾಗಿದೆ ಎಂದು ತಿಳಿಸಿದ್ದಾರೆ.

"ಈ ಶಿಲೀಂಧ್ರ ಸೋಂಕು ಕೋವಿಡ್ ರೋಗಿಗಳಲ್ಲಿ ದೀರ್ಘಕಾಲದ ಕಾಯಿಲೆ ಮತ್ತು ಮರಣಕ್ಕೆ ಕಾರಣವಾಗಿದೆ" ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಪತ್ರದಲ್ಲಿ ತಿಳಿಸಿದ್ದಾರೆ.

ಕಪ್ಪು ಶಿಲೀಂಧ್ರ ಮತ್ತು ಕೊರೋನಾ ವೈರಸ್‌ ಸೋಂಕು ಎರಡಕ್ಕೂ ಸಮಗ್ರ ಮತ್ತು ಸಂಘಟಿತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಸುಮಾರು 100 ಕ್ಕೂ ಹೆಚ್ಚು ಜನರಲ್ಲಿ ಈ ವೈರಸ್​ ಕಂಡು ಬಂದಿತ್ತು. ಹೀಗಾಗಿ ರಾಜಸ್ಥಾನ ಸರ್ಕಾರ ಮೊದಲ ಬಾರಿಗೆ ಇದೊಂದು ಸಾಂಕ್ರಾಮಿಕ ರೋಗ ಎಂದು ಬುಧವಾರ ಅಧಿಕೃತವಾಗಿ ಘೋಷಿಸಿತ್ತು. ಇಂದು ತೆಲಂಗಾಣ ಸರ್ಕಾರ ಸಹ ಕಪ್ಪು ಶಿಲೀಂಧ್ರ ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಅಧಿಸೂಚನೆ ಹೊರಡಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com