ಸಾಂದರ್ಭಿಕ ಚಿತ್ರ
ದೇಶ
ಮಹಾರಾಷ್ಟ್ರ: ಗಡ್ಚಿರೋಲಿ ಜಿಲ್ಲೆ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 13 ನಕ್ಸಲೀಯರ ಹತ್ಯೆ
ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಕನಿಷ್ಠ 13 ನಕ್ಸಲೀಯರು ಪೊಲೀಸರ ಗುಂಡಿನ ದಾಳಿಗೆ ಹತರಾಗಿದ್ದಾರೆ.
ಭುವನೇಶ್ವರ/ಗಡ್ಚಿರೊಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಭಾರೀ ಎನ್ ಕೌಂಟರ್ ನಲ್ಲಿ ಕನಿಷ್ಠ 13 ನಕ್ಸಲೀಯರು ಪೊಲೀಸರ ಗುಂಡಿನ ದಾಳಿಗೆ ಹತರಾಗಿದ್ದಾರೆ.
ಗಡ್ಚಿರೋಲಿ ಅರಣ್ಯ ಪ್ರದೇಶದ ಎಟಪಲ್ಲಿ ಎಂಬಲ್ಲಿ ಸಿ-60 ಕಮಾಂಡೊ ಪೊಲೀಸರು ಮತ್ತು ನಕ್ಸಲೀಯರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ 13 ಮಂದಿ ನಕ್ಸಲರು ಸಾವಿಗೀಡಾಗಿದ್ದಾರೆ ಎಂದು ಗಡ್ಚೊಲಿ ಜಿಲ್ಲೆಯ ಡಿಐಜಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ