ದೆಹಲಿ ಆಸ್ಪತ್ರೆಗಳಲ್ಲಿ ಸುಮಾರು 200 ಬ್ಲ್ಯಾಕ್ ಫಂಗಸ್‌ ರೋಗಿಗಳು

ದೆಹಲಿಯಾದ್ಯಂತ ಆಸ್ಪತ್ರೆಗಳಲ್ಲಿ ಬುಧವಾರ ರಾತ್ರಿಯವರೆಗೆ 197 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಶುಕ್ರವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿಯಾದ್ಯಂತ ಆಸ್ಪತ್ರೆಗಳಲ್ಲಿ ಬುಧವಾರ ರಾತ್ರಿಯವರೆಗೆ 197 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಶುಕ್ರವಾರ ಹೇಳಿದ್ದಾರೆ.

ದೆಹಲಿಯಲ್ಲಿ18 ರಿಂದ 44 ವಯೋಮಾನದ ಅನೇಕ ಕೋವಿಡ್ ಲಸಿಕಾ ಕೇಂದ್ರಗಳನ್ನು ಶುಕ್ರವಾರದಿಂದ ಮುಚ್ಚಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಹಲವು ದಿನಗಳ ಹಿಂದೆಯೇ ಕೋವಾಕ್ಸಿನ್ ಸ್ಟಾಕ್ ಖಾಲಿ ಆಗಿದೆ. ಕೋವಿಶೀಲ್ಡ್ ಡೋಸ್ ಸಹ ಮುಗಿದಿದೆ. ಹೀಗಾಗಿ ಇಂದು ಅನೇಕ ಲಸಿಕಾ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂದು ಜೈನ್ ಹೇಳಿದ್ದಾರೆ.

"ದೆಹಲಿಯ ಎಲ್ಲಾ ಆಸ್ಪತ್ರೆಗಳಲ್ಲಿ ಬುಧವಾರ ರಾತ್ರಿಯವರೆಗೆ 197 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ ಇತರ ರಾಜ್ಯಗಳಿಂದ ಚಿಕಿತ್ಸೆಗಾಗಿ ಬಂದ ರೋಗಿಗಳು ಸೇರಿದ್ದಾರೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಇಡೀ ದೇಶದಲ್ಲಿ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಚಿಕಿತ್ಸೆಯಲ್ಲಿ ಬಳಸುವ ಆಂಫೊಟೆರಿಸಿನ್-ಬಿ ಚುಚ್ಚುಮದ್ದಿನ ತೀವ್ರ ಕೊರತೆ ಇದೆ ಎಂದು ಜೈನ್ ಹೇಳಿದ್ದಾರೆ.

ಕೇಂದ್ರವು ದೆಹಲಿಗೆ 2,000 ಆಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ನೀಡುವ ಸಾಧ್ಯತೆಯಿದೆ, ನಂತರ ಅದನ್ನು ಆಸ್ಪತ್ರೆಗಳಿಗೆ ನೀಡಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com