ಕೊರೋನಾ 2ನೇ ಅಲೆಯಲ್ಲಿ ದೆಹಲಿಯಲ್ಲಿ 100 ಸೇರಿದಂತೆ ದೇಶಾದ್ಯಂತ 420 ವೈದ್ಯರ ಸಾವು: ಏಮ್ಸ್

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 420 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ದೆಹಲಿಯಲ್ಲೇ 100 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆ ವೇಳೆ ದೇಶಾದ್ಯಂತ ಸುಮಾರು 420 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ದೆಹಲಿಯಲ್ಲೇ 100 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ.

ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಹೃದ್ರೋಗತಜ್ಞರಾಗಿದ್ದ ಡಾ. ಕೆಕೆ ಅಗರ್‌ವಾಲ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದರು. ಡಾ. ಅಗರ್‌ವಾಲ್ (62) ಈ ಮೊದಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಕಳೆದ ವಾರ  ಏಮ್ಸ್‌ಗೆ ದಾಖಲಿಸಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು.

ಇದರ ಬೆನ್ನಲ್ಲೇ ದೇಶಾದ್ಯಂತ 2ನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವೈದ್ಯರ ಕುರಿತ ದತ್ತಾಂಶಗಳನ್ನು ಏಮ್ಸ್ ನೀಡಿದ್ದು, ದೆಹಲಿಯ 100 ವೈದ್ಯರು ಸೇರಿದಂತೆ ದೇಶಾದ್ಯಂತ ಒಟ್ಟು 420 ವೈದ್ಯರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ದೆಹಲಿಯಲ್ಲಿ ಅತ್ಯಧಿಕ ಅಂದರೆ 100 ಮಂದಿ ವೈದ್ಯರು ಸಾವನ್ನಪ್ಪಿದ್ದು, ಬಿಹಾರದಲ್ಲಿ 96 ಮಂದಿ ವೈದ್ಯರು ಸಾವನ್ನಪ್ಪಿದ್ದಾರೆ. ಉಳಿದಂತೆ ಉತ್ತರ ಪ್ರದೇಶದಲ್ಲಿ 41 ಮಂದಿ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ,

ಇನ್ನು ಕಳೆದ ಮೊದಲ ಅಲೆಯಲ್ಲಿ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರು. ಆದರೆ 2ನೇ ಅಲೆ ಆರಂಭವಾಗಿ 2 ತಿಂಗಳಲ್ಲಿಯೇ 420 ಮಂದಿ ವೈದ್ಯರು ಜೀವಕಳೆದುಕೊಂಡಿದ್ದಾರೆ. ಕೊರೋನಾ ಸೋಂಕಿನ 2ನೇ ಅಲೆ ಅತ್ಯಂತ ಮಾರಣಾಂತಿಕವಾಗಿ ಪರಿಣಮಿಸಿದ್ದು, ಪ್ರಮುಖವಾಗಿ ಆರೋಗ್ಯ  ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ಮಂದಿ ಸಿಬ್ಬಂದಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಐಎಂ ಅಧ್ಯಕ್ಷ ಡಾ.ಜೆಎ ಜಯಲಾಲ್ ಹೇಳಿದ್ದಾರೆ.

ಪ್ರಸ್ತುತ ಐಎಂಎ ಬಳಿ 3.5 ಲಕ್ಷ ಕಾರ್ಯನಿರತ ವೈದ್ಯ ಸದಸ್ಯರ ದತ್ತಾಂಶವಿದ್ದು, ಇಂದು ದೇಶಾದ್ಯಂತ 12ಲಕ್ಷಕ್ಕೂ ಅಧಿಕ ವೈದ್ಯರು ಕೋವಿಡ್ ಸಾಂಕ್ರಾಮಿಕದ ವೇಳೆ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com