ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಗೆ ತುತ್ತಾದವರಿಗೆ ಉಚಿತವಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಗೆ ತುತ್ತಾದವರಿಗೆ ಉಚಿತವಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಅವರು, ಆಯುಷ್ಮಾನ್ ಭಾರತ್ ಯೋಜನೆಯಡಿ ಈ ಬ್ಲ್ಯಾಕ್ ಫಂಗಸ್ ನ್ನು ಸೇರಿಸಿಲ್ಲ, ಅದೇ ರೀತಿ ಹಲವು ಅನೇಕ ಆರೋಗ್ಯ ವಿಮಾ ಯೋಜನೆಗಳಲ್ಲಿಯೂ ಸೇರಿಸಿಲ್ಲ, ಹೀಗಾಗಿ ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ನ್ನು ಸಾಂಕ್ರಾಮಿಕ ಎಂದು ಸಾಂಕ್ರಾಮಿಕ ರೋಗ ಕಾಯ್ದೆಯಡಿ ಘೋಷಿಸಬೇಕೆಂದು ರಾಜ್ಯ ಸರ್ಕಾರಗಳನ್ನು ಸಹ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡು ಚಿಕಿತ್ಸೆಯ ಅಗತ್ಯವಿರುವವರಿಗೆ ಸಾಕಷ್ಟು ವೈದ್ಯಕೀಯ ಸೌಲಭ್ಯಗಳೊಂದಿಗೆ ಉಚಿತವಾಗಿ ಚಿಕಿತ್ಸೆ ನೀಡುವಂತೆ ಕೂಡ ಪತ್ರದಲ್ಲಿ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಿಪೊಸೊಮಲ್ ಆಂಪೊಟೆರಿಸಿನ್-ಬಿ ಅತ್ಯಗತ್ಯವಾಗಿದ್ದು ಮಾರುಕಟ್ಟೆಯಲ್ಲಿ ಅದಕ್ಕೆ ಭಾರೀ ಕೊರತೆಯಿಂದ ಎಂದು ಕಂಡುಬರುತ್ತಿದೆ. ಅಲ್ಲದೆ ಆಯುಷ್ಮಾನ್ ಭಾರತ್ ಯೋಜನೆ ಮತ್ತು ಇತರ ಆರೋಗ್ಯ ವಿಮಾ ಯೋಜನೆಯಡಿ ಇದನ್ನು ಸೇರಿಸಿಲ್ಲ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೂಡ ಪ್ರಧಾನಿಯವರನ್ನು ಸೋನಿಯಾ ಗಾಂಧಿ ಪತ್ರದ ಮೂಲಕ ಗಮನ ಸೆಳೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com