ಯಾಸ್ ಚಂಡಮಾರುತ: ಪೂರ್ವ ಸಿದ್ಧತೆಗಳ ಕುರಿತು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಮೇ26ರಂದು ಒಡಿಶಾ ಕರಾವಳಿ ತೀರಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಲಿದ್ದು, ಮುಂಜಾಗ್ರತಾ ಪೂರ್ವ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮೇ26ರಂದು ಒಡಿಶಾ ಕರಾವಳಿ ತೀರಕ್ಕೆ ಯಾಸ್ ಚಂಡಮಾರುತ ಅಪ್ಪಳಿಸಲಿದ್ದು, ಮುಂಜಾಗ್ರತಾ ಪೂರ್ವ ಸಿದ್ಧತೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಯಲಿದೆ.

ಇದೇ ಮೇ 26ರಂದು ‘ಯಾಸ್‌’ ಚಂಡಮಾರುತವು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದ್ದು, ಆ ರಾಜ್ಯಗಳಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ದೂರ ಸಂಪರ್ಕ, ವಿದ್ಯುತ್‌, ನಾಗರಿಕ ವಿಮಾನಯಾನ, ಭೂ ವಿಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಅಂತೆಯೇ ಕೇಂದ್ರ ಸಚಿವರಾದ ಅಮಿತ್‌ ಶಾ ಸೇರಿದಂತೆ ಇತರ ಸಚಿವರು ಕೂಡ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಯಾಸ್‌’ ಚಂಡಮಾರುತವು ಭಾರಿ ಬಿರುಗಾಳಿಯ ಸ್ವರೂಪ ಪಡೆದು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com