ಅಸ್ಸಾಂ: ಅಸ್ಸಾಂ ನಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಡಿಎನ್ಎಲ್ಎ ಉಗ್ರ ಸಂಘಟನೆಯ 6 ಉಗ್ರರು ಸಾವನ್ನಪ್ಪಿದ್ದಾರೆ. ಅಸ್ಸಾಂ-ನಾಗಲ್ಯಾಂಡ್ ನ ಗಡಿ ಭಾಗದಲ್ಲಿರುವ ವೆಸ್ಟ್ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಉಗ್ರರು ಸಕ್ರಿಯರಾಗಿದ್ದ ಬಗ್ಗೆ ಮಾಹಿತಿ ಪಡೆದ ಅಸ್ಸಾಂ ಪೊಲೀಸ್ ತಂಡ ಹಾಗೂ ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳು ವೆಸ್ಟ್ ಕರ್ಬಿ ಆಂಗ್ಲಾಂಗ್ ನ ಎಎಸ್ ಪಿ ಪ್ರಕಾಶ್ ಸೋನೋವಾಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿಯಿತು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಕಾರ್ಯಾಚರಣೆ ವೇಳೆ ಭದ್ರತಾ ಸಿಬ್ಬಂದಿಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮಿಚಿಬೈಲಂಗ್ ಪ್ರದೇಶದಲ್ಲಿ 6 ಮಂದಿ ಉಗ್ರರು ಹತರಾಗಿದ್ದಾರೆ. ಮೃತ ಉಗ್ರರಿಂದ ಎಕೆ-47 ರೈಫಲ್ಸ್ ಹಾಗೂ ಹಲವು ಸುತ್ತುಗಳ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.
Advertisement