ದೇಶ

ಕೋವಿಡ್-19: ಸತತ 11ನೇ ದಿನವೂ ಹೊಸ ಪ್ರಕರಣಗಳನ್ನು ಮೀರಿಸಿದ ಚೇತರಿಕೆ; ದೇಶದಲ್ಲಿ ಪಾಸಿಟಿವ್ ಪ್ರಮಾಣ ಶೇ.8.09

ಕೋವಿಡ್-19: ಸತತ 11ನೇ ದಿನವೂ ಹೊಸ ಪ್ರಕರಣಗಳನ್ನು ಮೀರಿಸಿದ ಚೇತರಿಕೆ; ದೇಶದಲ್ಲಿ ಪಾಸಿಟಿವ್ ಪ್ರಮಾಣ ಶೇ.8.09
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೈನಂದಿನ ಚೇತರಿಕೆ ಪ್ರಕರಣಗಳ ಸಂಖ್ಯೆ ಸತತ 11ನೇ ದಿನವೂ ಹೊಸ ಪ್ರಕರಣಗಳನ್ನು ಮೀರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 3,02,544 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 2,37,28,011ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದೇ ಅವಧಿಯಲ್ಲಿ 2,22,315 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಇಂದು ಬೆಳಗ್ಗೆ ನವೀಕರಿಸಿದ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ದೇಶದಲ್ಲಿ ಚೇತರಿಕೆ ಪ್ರಮಾಣ ಶೇಕಡಾ 8.09 ರಷ್ಟಿದ್ದು, ವಾರದ ಪಾಸಿಟಿವ್ ಪ್ರಮಾಣ ಸಹ ಶೇಕಡಾ 12.66ಕ್ಕೆ ಇಳಿದಿದ್ದು, ಇನ್ನೂ 27,20,716 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

ಭಾರತದ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಶೇಕಡಾ 71.62 ರಷ್ಟು ಪ್ರಕರಣಗಳು ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಒಡಿಶಾದಲ್ಲಿವೆ ಎಂದು ಕೇಂದ್ರ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.