ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 1.96 ಲಕ್ಷ ಹೊಸ ಕೇಸ್ ಪತ್ತೆ, 3,511 ಮಂದಿ ಸಾವು

ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,96,427 ಜನರಲ್ಲಿ ಸೋಂಕು ದೃಢಪಟ್ಟಿದ್ದು, 3,511 ಮಂದಿ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,96,427 ಜನರಲ್ಲಿ ಸೋಂಕು ದೃಢಪಟ್ಟಿದ್ದು, 3,511 ಮಂದಿ ಸಾವನ್ನಪ್ಪಿದ್ದಾರೆ.

ಹಲವು ದಿನಗಳಿಂದ 4 ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 2 ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, 2ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ. 

ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,78,719ಕ್ಕೆ ತಲುಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,86,782ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,26,850 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,40,54,861ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 20,58,112 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 33,25,94,176 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 19,85,38,999 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com