ಸಿಬಿಐ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ

ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ. 
ಸುಬೋಧ್ ಕುಮಾರ್ ಜೈಸ್ವಾಲ್
ಸುಬೋಧ್ ಕುಮಾರ್ ಜೈಸ್ವಾಲ್
Updated on

ನವದೆಹಲಿ: ಹಿಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ. 

ಆದೇಶದ ಪ‍್ರಕಾರ ಜೈಸ್ವಾಲ್‌ ಅವರ ಅಧಿಕಾರವಧಿ ಎರಡು ವರ್ಷಗಳವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್‌ ಅವರ ಹೆಸರನ್ನು ಸಿಬಿಐ ನಿರ್ದೇಶಕ ಹುದ್ದೆಗೆ ಸೋಮವಾರ ಅಂತಿಮಗೊಳಿಸಿತ್ತು. ಮಹಾರಾಷ್ಟ್ರ ಕೇಡರ್‌ನ 1985 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಜೈಸ್ವಾಲ್, ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರಾಗಿದ್ದಾರೆ. ಮಹಾರಾಷ್ಟ್ರದ ಪೊಲೀಸ್‌ ಮಹಾನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.

ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ನ ಭಾಗವಾಗಿದ್ದರೂ ಸುಬೋಧ್ ಕುಮಾರ್ ಜೈಸ್ವಾಲ್  ಅವರು ಸಿಬಿಐನಲ್ಲಿ ಸೇವೆ ಸಲ್ಲಿಸಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com