ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು 1.73 ಲಕ್ಷ ಕೇಸ್ ಪತ್ತೆ, 3,617 ಮಂದಿ ಸಾವು

ಭಾರತದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 1,73,790 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ 45 ದಿನಗಳಲ್ಲೇ ಕನಿಷ್ಠವಾಗಿದೆ. ಇದೇ ವೇಳೆ ಶನಿವಾರ 3,617 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಭಾರತದಲ್ಲಿ ತಿಂಗಳಲ್ಲಿ 3ನೇ ಬಾರಿ ಕೋವಿಡ್ ಕೇಸುಗಳ ಸಂಖ್ಯೆ 2 ಲಕ್ಷಕ್ಕಿಂತ ಕಡಿಮೆ ದಾಖಲಾಗಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,73,790 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದು ಕಳೆದ 45 ದಿನಗಳಲ್ಲೇ ಕನಿಷ್ಠವಾಗಿದೆ. ಇದೇ ವೇಳೆ ಶನಿವಾರ 3,617 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,77,29,247ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,22,512ಕ್ಕೆ ತಲುಪಿದೆ. 

ಹೊಸ ಸೋಂಕಿನ ಇಳಿಕೆಯಿಂದಾಗಿ ದೈನಂದಿನ ಪಾಸಿಟಿವಿಟಿ ದರ ಶೇ. 9.84ಕ್ಕೆ ಇಳಿಕೆಯಾದಿದೆ. ಸತತ 5 ದಿನಗಳಿಂದ ಪಾಸಿಟಿವಿಟಿ ದರ ಶೇ.10ಕ್ಕಿಂತ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಶನಿವಾರ ಹೊಸದಾಗಿ ದೃಢಪಟ್ಟ ಪ್ರಕರಣಗಳೂ ಸೇರಿದಂತೆ ಸಕ್ರಿಯ ಸೋಂಕಿತರ ಸಂಖ್ಯೆ 22,28 ಲಕ್ಷಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ.90.80ಕ್ಕೆ ಹೆಚ್ಚಿದೆ. 

ಒಟ್ಟು ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 2,84,601 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಈ ವರೆಗೂ 2,51,78,011 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸತತ 16 ದಿನ ಕೂಡಾ ಸೋಂಕಿತರಿಗಿಂತ ಚೇತರಿಸಿಕೊಂಡವರ ಪ್ರಮಾಣ ಹೆಚ್ಚಿದೆ.
 
ಇನ್ನು ಭಾರತದಲ್ಲಿ ಒಂದೇ 20,80,048 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 34,11,19,909 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 20,89,02,445 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com