ಮುಂಬೈ: ಮನೆ ಕುಸಿದು 9 ಮಂದಿಗೆ ಗಾಯ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ವಾಣಿಜ್ಯ ನಗರಿ ಮುಂಬೈ ನಗರದ ಅಂಟಾಪ್ ಹಿಲ್​ ಪ್ರದೇಶದಲ್ಲಿ ಮನೆಯೊಂದು ಕುಸಿದುಬಿದ್ದ ಪರಿಣಾಮ 9 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿ.
Updated on

ಮುಂಬೈ: ವಾಣಿಜ್ಯ ನಗರಿ ಮುಂಬೈ ನಗರದ ಅಂಟಾಪ್ ಹಿಲ್​ ಪ್ರದೇಶದಲ್ಲಿ ಮನೆಯೊಂದು ಕುಸಿದುಬಿದ್ದ ಪರಿಣಾಮ 9 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಇಂದು ಬೆಳಗ್ಗೆ ಸುಮಾರು 8.00 ಗಂಟೆಗೆ ಘಟನೆ ನಡೆದಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ಸಿಯಾನ್ ಕೋಳಿವಾಡ ಕೊಳೆಗೇರಿಗಳಲ್ಲಿ ಘಟನೆ ನಡೆದಿದ್ದು, 4 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌದಾಯಿಸಿವೆ. ಮನೆಯ ಅವಶೇಷದಡಿ ಸಿಲುಕಿದ್ದ 9 ಮಂದಿಯನ್ನ ರಕ್ಷಿಸಿ ಸಯಾನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com