ಅತ್ಯಾಚಾರ ಪ್ರಕರಣ: ಅಖಿಲೇಶ್ ಯಾದವ್ ಸರ್ಕಾರದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿಗೆ ಜೀವಾವಧಿ ಶಿಕ್ಷೆ

ಚಿತ್ರಕೂಟ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ಲಖನೌ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ಗಾಯತ್ರಿ ಪ್ರಜಾಪತಿ
ಗಾಯತ್ರಿ ಪ್ರಜಾಪತಿ
Updated on

ನವದೆಹಲಿ: ಚಿತ್ರಕೂಟ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ಲಖನೌ ವಿಶೇಷ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಖಿಲೇಶ್ ಯಾದವ್ ಅವರ ಸಂಪುಟದ ಪ್ರಮುಖ ಸದಸ್ಯರಾಗಿದ್ದ ಪ್ರಜಾಪತಿ ಅವರು, ಸಾರಿಗೆ ಮತ್ತು ಗಣಿಗಾರಿಕೆ ಸಚಿವಾಲಯಗಳ ಖಾತೆಯನ್ನು ಹೊಂದಿದ್ದರು. ಅವರನ್ನು ಮಾರ್ಚ್ 2017 ರಲ್ಲಿ ಮಹಿಳೆಯ ಮೇಲೆ ಮತ್ತು ಆಕೆಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ನಿರ್ದೇಶನದ ಮೇರೆಗೆ ಸಚಿವರ ವಿರುದ್ಧ ಎಫ್‌ಐಆರ್ ಅನ್ನು ಗೌತಂಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಫೆಬ್ರವರಿ 18,2017 ರಂದು ಎಫ್‌ಐಆರ್ ದಾಖಲಾದ ನಂತರ, ಸಚಿವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು ಮತ್ತು ಅಂದಿನಿಂದ ಜೈಲಿನಲ್ಲಿದ್ದರು.

ಅಕ್ಟೋಬರ್ 2014 ರಿಂದ ಸಚಿವರು ಮತ್ತು ಅವರ ಸಹಚರರು ನನ್ನ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಹೇಳಿಕೊಂಡಿದ್ದಾರೆ. ಆರೋಪಿಗಳು ಜುಲೈ 2016 ರಲ್ಲಿ ಅವರ ಅಪ್ರಾಪ್ತ ಮಗಳಿಗೂ ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ ನಂತರ ಅವರ ವಿರುದ್ಧ ದೂರು ನೀಡಲು ನಿರ್ಧರಿಸಿದರು.

ಪ್ರಜಾಪತಿ ಜೊತೆಗೆ ಆಶಿಶ್ ಶುಕ್ಲಾ ಮತ್ತು ಅಶೋಕ್ ತಿವಾರಿ ಅವರು ಶಿಕ್ಷೆಗೆ ಗುರಿಯಾಗಿದ್ದಾರೆ. ಶುಕ್ಲಾ ಅಮೇಥಿಯಲ್ಲಿ ಮಾಜಿ ಕಂದಾಯ ಗುಮಾಸ್ತರಾಗಿದ್ದರೆ, ತಿವಾರಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು.

2017ರಿಂದ ಜೈಲಿನಲ್ಲಿರುವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮೇಲೆ ಹಲವು ಪ್ರಕರಣಗಳಿವೆ. ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ ದಾಖಲಾಗಿದೆ. ಸಚಿವರಾಗಿ ಭ್ರಷ್ಟಾಚಾರ ನಡೆಸಿದ ಆರೋಪವೂ ಪ್ರಜಾಪತಿ ಮೇಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com