ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ: ಬಿಎಸ್ ಎಫ್ ಸಿಬ್ಬಂದಿಯಿಂದ ಇಬ್ಬರು ಬಾಂಗ್ಲಾ ದೇಶಿಯರ ಹತ್ಯೆ

ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್‌ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.
ಬಿಎಸ್‌ಎಫ್‌ ಸಿಬ್ಬಂದಿ
ಬಿಎಸ್‌ಎಫ್‌ ಸಿಬ್ಬಂದಿ
Updated on

ನವದೆಹಲಿ: ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್‌ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.

ಗುಂಡಿನ ದಾಳಿ ವೇಳೆ ಭದ್ರತಾ ಪಡೆ ಯೋಧರೊಬ್ಬರಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌)ನ ವಕ್ತಾರರು ತಿಳಿಸಿದ್ದಾರೆ.

ಭಾರತದ ಗಡಿದಾಟಿ ಜಾನುವಾರುಗಳ ಕಳ್ಳಸಾಗಣೆಗೆ ಕಿಡಿಗೇಡಿಗಳು ನಸುಕಿನ 3 ಗಂಟೆಗೆ ಯತ್ನಿಸಿದ್ದರು. ವಾಪಸು ಮರಳುವಂತೆ ಸೂಚಿಸಿದರು. ಅದಕ್ಕೆ ಸ್ಪಂದಿಸಲಿಲ್ಲ. ಬದಲಿಗೆ ಕಬ್ಬಿಣದ ಸರಳು ಬಳಸಿ ಹಲ್ಲೆಗೆ ಮುಂದಾಗಿದ್ದರು. ಆತ ಆತ್ಮರಕ್ಷಣೆ ಕ್ರಮವಾಗಿ ಭದ್ರತಾ ಪಡೆ ಸಿಬ್ಬಂದಿಯು ಗುಂಡಿನ ದಾಳಿ ನಡೆಸಿದರು’ ಬಿಎಸ್ ಎಫ್  ಸಿಬ್ಬಂದಿ  ಅಂತರರಾಷ್ಟ್ರೀಯ ಗಡಿಗೆ ಅನುಗುಣವಾಗಿ ಹಾಕಿದ್ದ ಬೇಲಿಯ ಬಳಿ ಪರಿಶೀಲನೆ ನಡೆಸಿದಾಗ ಇಬ್ಬರು ಅಪರಿಚಿತ ಕಿಡಿಗೇಡಿಗಳ ಶವ ಪತ್ತೆಯಾಯಿತು ಎಂದು ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com