ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ

ಉತ್ತರ ಪ್ರದೇಶ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿ

ಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ. 

ಲಖನೌ: ಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ. 

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿರುವ ಐಎಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭಾನುವಾರದ ಹೇಳಿಕೆಯಲ್ಲಿಯೇ ಇದು ಚೆನ್ನಾಗಿ ಪ್ರತಿಫಲಿಸುತ್ತಿದೆ. 

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಯಾವುದೇ ಸಾಧ್ಯತೆಗಳನ್ನು ತಳ್ಳಿಹಾಕಿದಾಗ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭಾನುವಾರದ ಹೇಳಿಕೆಯಲ್ಲಿ ಇದು ಚೆನ್ನಾಗಿ ಪ್ರತಿಫಲಿಸುತ್ತದೆ.

ಬುಲಂದರ್ ಶಹರ್ ನಲ್ಲಿ ಭಾನುವಾರ ನಡೆದ ಪಕ್ಷದ ಸಭೆಯೊಂದರಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ನಾವು ನಾಮನಿರ್ದೇಶನ ಮಾಡುತ್ತೀವಿ. ಒಂದು ವೇಳೆ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಅದು ತನ್ನ ಸ್ವಂತ ಸಾಮರ್ಥ್ಯದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು. 

ಈ ಹಿಂದಿನ ಅನುಭವದಿಂದ ಪಾಠ ಕಲಿತಿರುವುದರಿಂದ ಯಾವುದೇ ಪ್ರಮುಖ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಳೆದ ತಿಂಗಳು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದರು. 

Related Stories

No stories found.

Advertisement

X
Kannada Prabha
www.kannadaprabha.com