ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ: ಚೆನ್ನೈ ಮತ್ತಿತರ ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಣೆ 

ಇತ್ತೀಚಿನ ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದ ಚೆನ್ನೈ ನಿವಾಸಿಗಳು ಇನ್ನೂ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೊಂದು ಮಳೆಯ ಪರಿಸ್ಥಿತಿ ಉತ್ತರ ತಮಿಳುನಾಡನ್ನು ಕಾಡಲಿದೆ. ನವೆಂಬರ್ 17ರಿಂದ 19ರವರೆಗೆ ಚೆನ್ನೈ ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗುತ್ತಿದೆ.
ಮರೀನಾ ಬೀಚ್ ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಕ್ಷಣೆ ಪಡೆಯುತ್ತಿರುವ ಜನರ ಚಿತ್ರ
ಮರೀನಾ ಬೀಚ್ ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಕ್ಷಣೆ ಪಡೆಯುತ್ತಿರುವ ಜನರ ಚಿತ್ರ
Updated on

ಚೆನ್ನೈ:  ಇತ್ತೀಚಿಗೆ  ನಿರಂತರ ಮಳೆಯಿಂದ ಉಂಟಾದ ಪ್ರವಾಹದಿಂದ ಚೆನ್ನೈ ನಿವಾಸಿಗಳು ಇನ್ನೂ ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೊಂದು ಮಳೆಯ ಪರಿಸ್ಥಿತಿ ಉತ್ತರ ತಮಿಳುನಾಡನ್ನು ಕಾಡಲಿದೆ. ನವೆಂಬರ್ 17ರಿಂದ 19ರವರೆಗೆ ಚೆನ್ನೈ ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗುತ್ತಿದೆ.

ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ ಪಟ್ಟು, ರಾಣಿಪೇಟೆ, ವೆಲ್ಲೂರು, ವಿಲ್ಲೂಪುರಂ, ತಿರುವಣ್ಣಮಲೈ, ಕಾಲಕುರಿಚಿ, ಕುಡಲೂರು ಮತ್ತಿತರ ಜಿಲ್ಲೆಗಳಲ್ಲಿ 12 ರಿಂದ 20 ಸೆಂಟಿ ಮೀಟರ್ ಮಳೆಯಾಗುವ ಸಾಧ್ಯತೆಯಿದ್ದು, ಪ್ರಾದೇಶಿಕ ಹವಾಮಾನ ಕೇಂದ್ರ ಆರೆಂಜ್ ಆಲರ್ಟ್ ಹೊರಡಿಸಿದೆ.

ಉತ್ತರ ಅಂಡಮಾನ್ ಸಮುದ್ರ ಹಾಗೂ ಸುತ್ತಮುತ್ತಲಿನ ವಾಯು ಭಾರತ ಕುಸಿತ ಮುಂದಿನ 48 ಗಂಟೆಗಳಲ್ಲಿ ಬಂಗಾಳ ಕೊಲ್ಲಿ ಪ್ರವೇಶಿಸುವ ಸಾಧ್ಯತೆಯಿದ್ದು, ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರ ಪ್ರದೇಶದಲ್ಲಿ ನವೆಂಬರ್ 18 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಮಧ್ಯಾಹ್ನ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 17 ರಂದು ಸಂಜೆ ಉತ್ತರ ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪ್ರವಾಹ ಪರಿಸ್ಥಿತಿ ಉಲ್ಬಣಿಸಬಹುದಾದ ಕೆರೆಗಳ ಗುರುತಿಸಲು ಡ್ರೋನ್ ಮೂಲಕ ಸರ್ವೆ ನಡೆಸಲಾಗಿದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಎನ್. ಸುಬ್ರಮಣಿಯನ್ ತಿಳಿಸಿದ್ದಾರೆ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com