ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ನಲ್ಲಿ ಪ್ರಧಾನಿ ಮೋದಿ ಲ್ಯಾಂಡಿಂಗ್, ವೈಮಾನಿಕ ಪ್ರದರ್ಶನಕ್ಕೂ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿ-130ಜೆ ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸುಲ್ತಾನ್‌ಪುರದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನ 3.3 ಕಿಮೀ ಏರ್‌ಸ್ಟ್ರಿಪ್‌ನಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿ-130ಜೆ ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸುಲ್ತಾನ್‌ಪುರದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನ 3.3 ಕಿಮೀ ಏರ್‌ಸ್ಟ್ರಿಪ್‌ನಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಪೂರ್ವಾಂಚಲ ಎಕ್ಸಪ್ರೆಸ್ ವೇ ಲೋಕಾರ್ಪಣೆ ಮಾಡಲಿದ್ದಾರೆ. 

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಮುಖ ಮೂಲಸೌಕರ್ಯ ಯೋಜನೆಯನ್ನು ಉದ್ಘಾಟಿಸಲಾಗುತ್ತಿದೆ. ಈ ಎಕ್ಸ್​ಪ್ರೆಸ್ ವೇನಲ್ಲೇ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡಲಾಗುತ್ತದೆ.

ಸುಲ್ತಾನ್‌ಪುರ ಜಿಲ್ಲೆಯ ಕರ್ವಾಲ್ ಖೇರಿಯಲ್ಲಿ ಆರು ಪಥಗಳ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1.30ರ ಸುಮಾರಿಗೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. 

ಉದ್ಘಾಟನೆಯ ನಂತರ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಎಕ್ಸ್​ಪ್ರೆಸ್ ವೇನಲ್ಲಿ ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡಲಾಗುತ್ತೆ. ಸುಲ್ತಾನ್‌ಪುರ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲಾದ 3.2 ಕಿಮೀ ಉದ್ದದ ಏರ್‌ಸ್ಟ್ರಿಪ್‌ನಲ್ಲಿ ಭಾರತೀಯ ವಾಯುಪಡೆಯ ವಿಮಾನಗಳ ವೈಮಾನಿಕ ಪ್ರದರ್ಶನಕ್ಕೂ ಪ್ರಧಾನಿ ಮೋದಿ ಸಾಕ್ಷಿಯಾಗಲಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಲ್ಯಾಂಡಿಂಗ್ ಮತ್ತು ಟೇಕಾಫ್ ಮಾಡಲು ಅನುಕೂಲವಾಗುವಂತೆ ಪೂರ್ವಾಂಚಲ್ ಎಕ್ಸ್​ಪ್ರೆಸ್ ವೇ ನಿರ್ಮಿಸಲಾಗಿದೆ. ಈ ಹಿಂದೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಿಂದ ಆಗ್ರಾವರೆಗೂ ನಿರ್ಮಿಸಿರುವ ಯಮುನಾ ಎಕ್ಸಪ್ರೆಸ್ ವೇನಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳನ್ನು ಲ್ಯಾಂಡ್ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com